#Exclusive NewsTop Newsಕ್ರೈಂ ಸ್ಟೋರಿಜಿಲ್ಲೆಸುದ್ದಿ

ರಾಯಚೂರು ; ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವು..!

ರಾಯಚೂರು : ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ನಡೆದಿದೆ. ಕ್ರೂಸರ್ ಚಾಲಕ ಶಿವ (24), ಮಂತ್ರಾಲಯದ  ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಅಯ್ಯವಂದನ್ (18), ಸುಜೇಂದ್ರ (22) ಹಾಗೂ ಅಭಿಲಾಷ್​(20) ಮೃತ ದುರ್ದೈವಿಗಳು.

ಮಂತ್ರಾಲಯದಿಂದ ಹಂಪಿಯ ನರಹರಿ ಆರಾಧನೆಗೆ ತೆರಳುತ್ತಿದ್ದ ವೇಳೆ ಸಿಂಧನೂರಿನ ಅರಗಿನಮರದ ಕ್ಯಾಂಪ್ ಬಳಿ ಅಪಘಾತ ಸಂಭವಿಸಿದೆ.ಘಟನೆಯಲ್ಲಿ 10 ಜನರಿಗೆ ಗಂಭೀರ ಗಾಯವಾಗಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಿಂಧನೂರು ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಸಿಂಧನೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments (0)

Your email address will not be published. Required fields are marked *

Back to top button