ಬೆಂಗಳೂರು ನಗರದಲ್ಲಿ ರಾತ್ರಿ 10.00 ಗಂಟೆಯಿಂದ ಬೆಳಗ್ಗೆ 6.00 ಗಂಟೆಯವರೆಗೆ ಸರಾಸರಿ 66 ಮಿ.ಮೀ ಮಳೆಯಾಗಿದೆ. ಅತಿ ಹೆಚ್ಚು ಕೆಂಗೇರಿಯಲ್ಲಿ 132 ಮಿ.ಮೀ, ಅತೀ ಕಡಿಮೆ ಗೊಟ್ಟಿಗೆರೆಯಲ್ಲಿ 32 ಮಿ.ಮೀ ಮಳೆಯಾಗಿದೆ
ಮಹದೇವಪುರ ವಲಯ:
* ಮಹದೇವಪುರ ವಲಯದಲ್ಲಿ ಸುಮಾರು 10 ಕಡೆ ಜಲಾವೃತವಾಗಿದ್ದು, ಪ್ರಮುಖವಾಗಿ ಸಾಯಿ ಲೇಔಟ್ ಪ್ರದೇಶವು ಸಂಪೂರ್ಣ ಜಲಾವೃತವಾಗಿದೆ. 6 ಟ್ರ್ಯಾಕ್ಟರ್, 2 ಜೆ.ಸಿ.ಬಿ, 35 ಸಿಬ್ಬಂದಿಗಳು, 3 ಅಗ್ನಿ ಶಾಮಕ ವಾಹನ, ಎಸ್.ಡಿ.ಆರ್.ಎಫ್ ತಂಡದಿಂದ 2 ಬೋಟ್ ವ್ಯವಸ್ಥೆ ಮಾಡಲಾಗಿದೆ.
* ಮಾರತ್ತಹಳ್ಳಿಯ ದೀಪ ನರ್ಸಿಂಗ್ ಹೋಮ್, ಚಿನ್ನಪ್ಪನಹಳ್ಳಿ 5ನೇ ಕ್ರಾಸ್, ಪಣತ್ತೂರ್ ರೈಲ್ವೆ ಕೆಳಸೇತುವೆ, ಗ್ರೀನ್ ಹುಡ್, ಇಬ್ಬಲೂರು ಜಂಕ್ಷನ್, ಬಾಲಾಜಿ ಲೇಔಟ್ – ಕೊತ್ತನೂರು, ಎ. ನಾರಾಯಣಪುರದ ಕೃಷ್ಣ ನಗರ, ಸುನೀಲ್ ಲೇಔಟ್, ಹರಳೂರು, ಬಿ.ಎಸ್.ಪಿ ಲೇಔಟ್‌ನ ಕಸವನಹಳ್ಳಿ ಕಡೆಗಳಲ್ಲಿ ರಸ್ತೆಗಳ ಮಲೆ ನೀರು ಮತ್ತು ಮನೆಗಳಿಗೆ ನೀರು ನುಗ್ಗಿರುವ ವರದಿಯಾಗಿದೆ.
ಪೂರ್ವ ವಲಯ:
* ರಾಜಕಾಲುವೆಯಲ್ಲಿ ನೀರು ತುಂಬಿ ಹಿಮ್ಮುಖವಾಗಿ ಚಲಿಸಿರುವ ಪರಿಣಾಮ ಹೆಚ್.ಬಿ.ಆರ್ 5, 6, 7, 8ನೇ ಬ್ಲಾಕ್, ಬೈರಸಂದ್ರ ಲೇಔಟ್, ಕೆಂಪೇಗೌಡ ರಸ್ತೆ, ಕಾಮರಾಜ ನಗರ ಪ್ರದೇಶಗಳು ಜಲಾವೃತವಾಗಿದೆ.
ಬೊಮ್ಮನಹಳ್ಳಿ ವಲಯ:
* ಹೆಚ್.ಎಸ್.ಆರ್ ಲೇಔಟ್ 6 ಮತ್ತು 7ನೇ ಸೆಕ್ಟರ್ ಮತ್ತು ಬನ್ನೇರುಘಟಟ್ಟ ಬಿಳೇಕಲ್ಲಹಳ್ಳಿ ಸಿಗ್ನಲ್ ನ ರಸ್ತೆಯಲ್ಲಿ ನೀರು ನಿಂತಿದೆ. ಯಲಚೇನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿದೆ
ದಕ್ಷಿಣ ವಲಯ:
* ಕೆ-100, ಕೆ-200 ಬೃಹತ್ ನೀರುಗಾಲುವೆಗಳು ಸಂಪರ್ಕ ಕಲ್ಪಿಸುವ ಸ್ಥಳದಲ್ಲಿ ಅಗಲೀಕರಣ ಕಡಿಮೆ ಇರುವ ಪರಿಣಾಮ ನಿರಿನ ಹರಿವಿನ ಮಟ್ಟ ಹೆಚ್ಚಾಗಿ ಮಡಿವಾಳ, ಡಾಲರ್ಸ್ ಕಾಲೋನಿ, ಕೋರಮಂಗಲದ 6ನೇ ಬ್ಲಾಕ್, ಈಜೀಪುರ ಪ್ರದೇಶಗಳು ಜಲಾವೃತವಾಗಿದೆ.
* ವೃಷಭಾವತಿ ವ್ಯಾಲಿ ಗಾಳಿ ಆಂಜನೇಯ ದೇವಸ್ಥಾನದ ಬಳಿ ಜಲಾವೃತವಾಗಿ ಮನೆಗಳಿಗೆ ನೀರು ನುಗ್ಗಿದೆ
ಯಲಹಂಕ ವಲಯ:
* ಟಾಟಾ ನಗರ, ಚೌಡೇಶ್ವರಿ ನಗರದ ಅಟ್ಟೂರು ವ್ಯಾಪ್ತಿಯಲ್ಲಿ ಸುಮಾರು 15 ಮನೆಗಳಿಗೆ, ಡಿಫೆನ್ಸ್ ಲೇಔಟ್ ಹಾಗೂ ದ್ವಾರಕಾ ನಗರದಲ್ಲಿ ಸುಮಾರು 5 ಮನೆಗಳಿಗೆ ನೀರು ನುಗ್ಗಿದೆ
ರಾಜರಾಜೇಶ್ವರಿ ನಗರ ವಲಯ:
* ಐಡಿಯಲ್ಸ್ ಹೋಮ್ಸ್ 1ನೇ ಎ ಕ್ರಾಸ್ ವೃಷಭಾವತಿ ವ್ಯಾಲಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ಹಿಮ್ಮುಖವಾಗಿ ಚಲಿಸಿದ ಪರಿಣಾಮ 3 ಹಸು, 1 ಕರು ಹಾಗೂ 1 ಎಮ್ಮೆ ಸೇರಿ 5 ಜಾನುವಾರಗಳು ಮೃತಪಟ್ಟಿವೆ.
* ವಿಜಯಶ್ರೀ ಬಡಾವಣೆ- ಹೆಮ್ಮಿಗೆಪುರ ರಾಜಕಾಲುವೆಯಲ್ಲಿ ನೀರು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಜಲಾವೃತವಾಗಿದೆ
* ಕೆಂಗೇರಿ ಬಳಿಯ ಕೋಟೆ ಲೇಔಟ್ ನಲ್ಲಿ ಸುಮಾರು 100 ಮನೆಗಳಿಗೆ ನೀರು ನುಗ್ಗಿದೆ
ದಾಸರಹಳ್ಳಿ ವಲಯ:
* ಕೆ.ಜಿ ಹಳ್ಳಿ, ಡಿಫೆನ್ಸ್ ಕಾಲೋನಿ, ಮೇಡರಹಳ್ಳಿಯ ಶ್ರೀದೇವಿ ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ
* ರುಕ್ಮಿಣಿ ನಗರ, ವಿದ್ಯಾನಗರ, ಬಿ.ಟಿ.ಎಸ್ ಲೇಔಟ್ ಗಳಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದೆ
ಪಶ್ಚಿಮ ವಲಯ:
* ಕೆ.ಪಿ ಅಗ್ರಹಾರದಲ್ಲಿ ರಾಜಕಾಲುವೆಯಲ್ಲಿ ನೀರಿನ ಹರಿವಿನ ಮಟ್ಟ ಹೆಚ್ಚಾಗಿ 20 ಮನೆಗಳಿಗೆ ನೀರು ನುಗ್ಗಿದೆ
ಧರೆಗುರುಳಿದ ಮರಗಳ ತೆರವು ಕಾರ್ಯಾಚರಣೆ:
* ರಾತ್ರಿ ಸುರಿದ ಮಳೆಯಿಂದಾಗಿ 27 ಮರಗಳು, 43 ಮರದ ರೆಂಬೆ/ಕೊಂಬೆಗಳು ಧರೆಗುರುಳಿವೆ.
ಯಲಹಂಕ ವಲಯದ ಎಲ್ಲಾ ಕೆರೆಗಳು ಭರ್ತಿ:
ಯಲಹಂಕ ವಲಯ ವ್ಯಾಪ್ತಿಯಲ್ಲಿ 29 ಕೆರೆಗಳು ಬರಲಿದ್ದು, ಎಲ್ಲಾ ಕೆರೆಗಳು ಕೂಡ ಸಂಪೂರ್ಣವಾಗಿ ತುಂಬಿವೆ.