Freedom TV
ಬೆಂಗಳೂರಿನಲ್ಲಿ ಧಾರಾಕಾರ ಮಳೆ : ವಾಹನ ಸಂಚಾರ ಅಸ್ತವ್ಯಸ್ತ

ಇಂದು ಸಂಜೆ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಕೆಲಸ ಮುಗಿಸಿಕೊಂಡು ಮನೆ ಕಡೆ ಹೊರಟಿದ್ದ ವಾಹನ ಸವಾರರಿಗೆ ತೊಂದರೆ ಉಂಟಾಗಿದೆ. ವಿಜಯನಗರ, ಗೋವಿಂದರಾಜನಗರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ಸದಾಶಿವನಗರ, ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್ ಸೇರಿದಂತೆ ನಗರದ ಬಹುತೇಕ ಏರಿಯಾದಲ್ಲಿ ಧಾರಾಕಾರ ಮಳೆಯಾಗಿದೆ.
ಮಳೆಯಿಂದಾಗಿ ಬಹುತೇಕ ಕಡೆ ವಿದ್ಯುತ್ ಸರಬರಾಜಿನಲ್ಲಿ ತೊಂದರೆ ಉಂಟಾಗಿದ್ದು, ಹಲವು ಏರಿಯಾಗಳಲ್ಲಿ ಪವರ್ ಕಟ್ ಮಾಡಲಾಗಿದೆ. ವಿಶೇಷವಾಗಿ, ಅಂಡರ್ ಬ್ರಿಡ್ಜ್ ನಲ್ಲಿ ವಾಹನಗಳು ನೀರಿನಲ್ಲಿ ಸಿಲುಕಿಕೊಂಡಿರುವ ದೃಶ್ಯ ಸರ್ವೇಸಾಮಾನ್ಯವಾಗಿದೆ.
ಮಳೆ ಇನ್ನೂ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅತಿಯಾಗಿ ಜಾಗರೂಕರಾಗಿರಲು ಸ್ಥಳೀಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಶೀಘ್ರವೇ ವಾಹನ ಸಂಚಾರ ಸುಗಮಗೊಳ್ಳಲು ಸಂಬಂಧಿಸಿದ ಇಲಾಖೆಗಳು ಕ್ರಮಕೈಗೊಳ್ಳುತ್ತಿವೆ.



