Wednesday, January 28, 2026
24.9 C
Bengaluru
Google search engine
LIVE
ಮನೆ#Exclusive NewsTop Newsನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ?

ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ?

ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ ಹವಾಮಾನದಲ್ಲಿ ವೊಪರೀತವಾಗಿ ಬದಲಾವಣೆ ಆಗಿದೆ. ನಿನ್ನೆ ಶನಿವಾರ ತಾಪಮಾನದಲ್ಲಿ ಭಾರೀ ಇಳೆಕೆ ಆಗಿದ್ದು, ತೀವ್ರ ಮಂಜು, ಚಳಿ ವಾತಾವರಣ ಕಂಡು ಬಂದಿದೆ. ಇದೇ ವಾತವರಣ ಮುಂದುವರಿಯುವ ಮುನ್ಸೂಚನೆ ಇದ್ದು, ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಥಂಡಿ ಆವರಿಸಿಕೊಳ್ಳುತ್ತಿದೆ. ಈ ಮಧ್ಯೆ ರಾಜ್ಯದ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಮಳೆ ಎಚ್ಚರಿಕೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿವೆ. ಹೀಗಾಗಿ, ದಕ್ಷಿಣ ಒಳನಾಡಿನ ಹಲವು ಭಾಗದಲ್ಲಿ ಈಗಾಗಲೇ ಮೋಡ ಕವಿದ ವಾತಾವರಣ ಇದೆ. ಸೋಮವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳದಲ್ಲಿ ತುಂತುರು ಮಳೆ ಯಾಗುವ ಸಾಧ್ಯತೆ ಇದೆ.

ಉಳಿದಂತೆ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆ ಮಂಜು ಮುಸುಕಿನ ವಾತಾವರಣ ಇರಲಿದೆ. ಮಂಗಳವಾರದಿಂದ ಬಹುತೇಕ ರಾಜ್ಯದಲ್ಲಿ ಒಣ ಹವೆ ಇರಲಿದೆ. ರಾಜ್ಯದ ಒಳನಾಡಿನ ಕೆಲವಡೆ ಮಂಜು ಮುಸುಕಿನ ಪರಿಸ್ಥಿತಿ ಇರಲಿದೆ ಎಂದು ಇಲಾಖೆ ತಿಳಿಸಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments