ಬೆಂಗಳೂರು: ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಇಂದು ರಾಜಧಾನಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ವೆಂಕಟ್ಟಪ್ಪ ನಾಯಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೆಲ ಕ್ಷಣಗಳ ಹಿಂದಷ್ಟೇ ಕೊನೆಯುಸಿರೆಳೆದಿದ್ದಾರೆ.
ಇನ್ನು, ನಾಳೆ ಸಕಲ ಸರ್ಕಾರಿ ಮರ್ಯಾದೆಯೊಂದಿಗೆ ಹುಟ್ಟೂರಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎನ್ನಲಾಗಿದೆ.