ರಾಜಸ್ಧಾನ : ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‌ಲಾಲ್ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇತ್ತೀಜಿಗೆ ನಡೆದ ರಾಜಸ್ಧಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ್ನು ಸೋಲಿಸಿ 199 ವಿಧಾನಸಭಾ ಸ್ಥಾನಗಳ ಪೈಕಿ 115 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ ಕಾಂಗ್ರೆಸ್ ಪಕ್ಷಕ್ಕೆ ಕೇವಲ 69 ಸ್ಥಾನಗಳು ದೊರಕಿದೆ. ಇನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಂತಿಮವಾಗಿ ಭಜನ್‌ಲಾಲ್ ಶರ್ಮಾ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.
ಇನ್ನು, ರಾಜಸ್ಥಾನದ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ರಾಜ್ಯದ ನೂತನ ಮುಖ್ಯಮಂತ್ರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಏಕನಾಥ್ ಶಿಂಧೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ರಾಜಸ್ಥಾನ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.