ಸೋಮವಾರ ರಾಜ್ಯಸಭಾ ಚುನಾವಣೆ ನಡೆಯಲಿದ್ದು, ರಾಜಕೀಯ ಚಟುವಟಿಕೆ ಬಿರುಸುಗೊಂಡಿವೆ. ನಾಲ್ಕು ಸ್ಥಾನಗಳಿಗೆ ಐವರು ಸ್ಪರ್ಧೆ ಮಾಡಿದ್ದು, ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಗೆಲ್ಲುವುದು ಹೆಚ್ಚು ಕಡಿಮೆ ಖಚಿತವಾಗಿದೆ. ಎನ್ಡಿಎಯ ಹೆಚ್ಚುವರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆಲ್ಲುವ ಅವಕಾಶಗಳು ಕ್ಷಣದಿಂದ ಕ್ಷಣಕ್ಕೆ ಕ್ಷೀಣಿಸತೊಡಗಿದೆ.
ನಾಲ್ವರು ಪಕ್ಷೇತರರ ಪೈಕಿ ಮೂವರು ಈಗಾಗಲೇ ಕಾಂಗ್ರೆಸ್ ಪರ ನಿಲ್ಲುವುದು ಖಚಿತವಾಗಿತ್ತು. ಇದೀಗ ಗಂಗಾವತಿಯ ಶಾಸಕ ಜನಾರ್ದನ ರೆಡ್ಡಿ ಸಹ ಕಾಂಗ್ರೆಸ್ ಅಭ್ಯರ್ಥಿಯನ್ನೇ ಬೆಂಬಲಿಸಲು ತೀರ್ಮಾನಿಸಿದ್ದು, ಬಿಜೆಪಿಗೆ ಶಾಕ್ ನೀಡಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸಚಿವ ಶಿವರಾಜ್ ತಂಗಡಗಿ ಜೊತೆಗೂಡಿ ಮಾಜಿ ಮಂತ್ರಿ ಜನಾರ್ದನ ರೆಡ್ಡಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಾಳೆ ನಮ್ಮ ಮತ ಕಾಂಗ್ರೆಸ್ಗೆ ಬೀಳುತ್ತೆ ಎಂಬ ಮಾತು ನೀಡಿದ್ದಾರೆ ಎನ್ನಲಾಗಿದೆ.
ಇಂದು ವಿಧಾನಮಂಡಲ ಕಲಾಪ ಮುಗಿದ ಬಳಿಕ ಕಾಂಗ್ರೆಸ್ ಶಾಸಕರೆಲ್ಲಾ ಹಿಲ್ಟನ್ ಹೋಟೆಲ್ಗೆ ಶಿಫ್ಟ್ ಆಗಲಿದ್ದಾರೆ.