ಬೆಂಗಳೂರು: ಕಾಪಿರೈಟ್ ಉಲ್ಲಂಘನೆ ಆರೋಪದಡಿ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬೆನ್ನಲ್ಲೇ ರಕ್ಷಿತ್ ಶೆಟ್ಟಿ ಟೀಮ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದೆ. ಈ ವಿಚಾರವಾಗಿ ನಮಗೆ ಈವರೆಗೂ ಯಾವುದೇ ನೋಟಿಸ್ ಬಂದಿಲ್ಲ ಎಂದು ಮಾತನಾಡಿದ್ದಾರೆ.

‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಈಗ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲು ಆಗಿದೆ. ಈ ವಿಚಾರಕ್ಕೆ ಪರಮ್ವಾ ಸ್ಟುಡಿಯೋಸ್ ಪ್ರತಿಕ್ರಿಯಿಸಿ, ನಮಗೆ ಇದುವರೆಗೂ ಯಾವುದೇ ನೋಟಿಸ್ ಬಂದಿಲ್ಲ. ಹಾಗಾಗಿ ನೋಟಿಸ್ ಬಂದ ನಂತರ ಉತ್ತರಿಸುತ್ತೇವೆ ಎಂದು ಹೇಳಿದೆ.

ಏನಿದು ಪ್ರಕರಣ?
ರಕ್ಷಿತ್ ಶೆಟ್ಟಿ ವಿರುದ್ಧ ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ನೀಡಿದ್ದಾರೆ. ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ ಹಾಡು’ ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಪರಮ್ವಾ ಸ್ಟುಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಬಳಕೆ ಆದ `ಗಾಳಿ ಮಾತು’ ಮತ್ತು `ನ್ಯಾಯ ಎಲ್ಲಿದೆ’ ಚಿತ್ರದ ಹಾಡುಗಳನ್ನು ಅಕ್ರಮವಾಗಿ ಬಳಕೆ ಮಾಡಿದ್ದಾರೆ. ಹಕ್ಕುಸ್ವಾಮ್ಯ ಹಾಗೂ ಪ್ರಸಾರದ ಹಕ್ಕನ್ನ ಖರೀದಿ ಮಾಡದೇ ಹಾಡುಗಳ ಬಳಕೆಯಾಗಿದೆ ಎಂದು ನವೀನ್ ಕುಮಾರ್ ಆರೋಪಿಸಿದ್ದಾರೆ.

2024ರ ಜನವರಿಯಲ್ಲಿ ಚಿತ್ರದ ಹಾಡುಗಳ ಬಳಕೆ ಬಗ್ಗೆ ಮಾತುಕತೆಯಾಗಿತ್ತು. ಆದರೆ ಈ ಸಿನಿಮಾದ ಹಾಡಿನ ಬಳಕೆ ಬಗ್ಗೆ ಮಾತುಕತೆ ಸರಿ ಹೊಂದದೇ ಇದ್ದರಿಂದ ಅಲ್ಲಿಗೆ ನಿಲ್ಲಿಸಲಾಗಿತ್ತು. ಬಳಿಕ 2024ರ ಮಾರ್ಚ್‌ನಲ್ಲಿ ಒಟಿಟಿಯಲ್ಲಿ ರಕ್ಷಿತ್ ಶೆಟ್ಟಿ `ಬ್ಯಾಚುಲರ್ ಪಾರ್ಟಿ’ ಸಿನಿಮಾ ರಿಲೀಸ್ ಆಗಿತ್ತು. ಈ ವೇಳೆ, ಸಿನಿಮಾ ಗಮಿಸಿದಾಗ ಎರಡು ಚಿತ್ರಗಳ ಹಾಡು ಬಳಕೆಯಾಗಿತ್ತು.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

By admin

Leave a Reply

Your email address will not be published. Required fields are marked *

Verified by MonsterInsights