ರಾಜ್ಯಸುದ್ದಿ

Ramanagara|ಡೈರಿ ಕಾರ್ಯದರ್ಶಿ ನೇಮಕ ವಿಚಾರಕ್ಕೆ ಕಾಂಗ್ರೆಸ್-ಜೆಡಿಎಸ್ ಜಟಾಪಟಿ

ರಾಮನಗರ : ಡೈರಿ ಕಾರ್ಯದರ್ಶಿ ನೇಮಕ ವಿಚಾರಕ್ಕೆ ಕಾಂಗ್ರೆಸ್-ಜೆಡಿಎಸ್ ನಡುವೆ ಜಟಾಪಟಿ ನಡೆಯುತ್ತಿದ್ದು, ಕಾಂಗ್ರೆಸ್ ಅಧಿಕಾರ ದುರುಪಯೋಗ ಪಡಿಸಿಕೊಂಡು ಕಾರ್ಯದರ್ಶಿ ನೇಮಕ ಮಾಡಿದೆ ಎಂದು ರಾಮನಗರದ ತಾಲೂಕಿನ ಅಣ್ಣಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ನಗರದ ಐಜೂರು ವೃತ್ತದಲ್ಲಿ ಹತ್ತಾರು ಕ್ಯಾನ್ ಹಾಲು ಸುರಿದು ಆಕ್ರೋಶ ಹೊರಹಾಕಿದ್ದಾರೆ.

ಬೆಂ-ಮೈ ಹಳೇ ಹೆದ್ದಾರಿಯಲ್ಲಿ ಹಸು ಕಟ್ಟಿ, ರಸ್ತೆ ತಡೆದು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಮುಖಂಡ ಹಾಗೂ ಬಮೂಲ್ ನಿರ್ದೇಶಕ ಪಿ.ನಾಗರಾಜು ಭಾವಚಿತ್ರಕ್ಕೆ ಚಪ್ಪಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.

ಡೈರಿ ಕಾರ್ಯದರ್ಶಿ ಬದಲಾವಣೆ ಮಾಡುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ರಸ್ತೆಯಲ್ಲೇ ಮಲಗಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಡೈರಿ ಮುಂದೆ ಸಾವಿರಾರು ಲೀಟರ್ ಹಾಲು ಸುರಿದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.

Comments (0)

Your email address will not be published. Required fields are marked *

Back to top button