Top Newsಕ್ರೈಂ ಸ್ಟೋರಿಸುದ್ದಿ

ಮಾಗಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಸ್ಥಳದಲ್ಲೇ ಐವರು ದುರ್ಮರಣ

ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಭದ್ರಾಪುರ ಗ್ರಾಮದ ಬಳಿ ನಡೆದಿದೆ. ಕಾರು ಮಾಗಡಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮಾಗಡಿ ಮೂಲದ ಒಂದೇ ಕುಟುಂಬದವರು ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಮೃತದೇಹಗಳನ್ನು ಹೊರತೆಗದು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕುದೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕುದೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Comments (0)

Your email address will not be published. Required fields are marked *

Back to top button