
ಬೆಂಗಳೂರು: ಇಂದು ರಾಜ್ಯ ಕೇಂದ್ರ ಕಚೇರಿ ಜೆ.ಪಿ ಭವನದಲ್ಲಿ ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ರಾಮನಗರ ತಾಲ್ಲೂಕು ಅಧ್ಯಕ್ಷರಾಗಿ ಸಬ್ಬಕೆರೆ ಶ್ರೀ ಶಿವಲಿಂಗಪ್ಪ ನೇಮಕಗೊಂಡರು. ಇದೇ ವೇಳೆ ಪಕ್ಷದ ಕಚೇರಿಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಅಭಿನಂದನೆ ತಿಳಿಸಿದರು. ಇದೇ ವೇಳೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು ಅವರು ಸೇರಿದಂತೆ ರಾಮನಗರದ ಕ್ಷೇತ್ರದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.





