ಚಿಕ್ಕಮಗಳೂರು : ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣವನ್ನ ಸಿಎಂ ಸಿದ್ದರಾಮಯ್ಯ ಎನ್‌ಐಎಗೆ ಕೊಡುವ ಸಾಧ್ಯತೆ ಇದೆ ಎಂದು ಹೇಳಿದರು.
ಚಿಕ್ಕಮಗಳೂರಲ್ಲಿ ಸುದ್ದಿಗಾರರ ಜೊತೆ ಮಾತಾಡಿದ ಸಿಎಂ ಸಿದ್ದರಾಮಯ್ಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಸರ್ಕಾರ ಪರೀಗಣಿಸಲಾಗಿದೆ.ಈಗಾಗಲೇ ಸಿಸಿಬಿ ತನಿಖೆ ನಡೆಸುತ್ತಿದ್ದು.ವಿವಿಧ ಕೋನಗಳಲ್ಲಿ ತನಿಖೆ ಮುಂದುವರೆದಿದೆ. ಹಿಂದೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಇತರೆ ಸ್ಫೋಟಕಗಳ ಆರೋಪಿಗಳ ಬಗ್ಗೆಯೂ ನಿಗಾ ಇಡಲಾಗಿದೆ ಎಂದು ಚಿಕ್ಕಮಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಾದ್ಯಮಗಳಿಗೆ ಪ್ರತಿಕ್ರಿಯೆಸಿದ್ದಾರೆ.