ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಇಂದು ಆರೋಪಿಗಳನ್ನು ಕರೆ ತಂದು ಸ್ಪಾಟ್ ಮಹಜರು ನಡೆಸುತ್ತಿದೆ. ಮುಂಜಾನೆ 5:30ಕ್ಕೆ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಗೆ ಆರೋಪಿಗಳಾದ ಮಸ್ಸಾವೀರ್, ಅಬ್ಧುಲ್ ಮತೀನ್ ತಹಾ ಅವರನ್ನು ಕರೆದುಕೊಂಡ ಬಂದ ಎನ್‌ಐಎ ಸ್ಥಳ ಮಹಜರು ಪ್ರಕ್ರಿಯೆ ನಡೆಸುತ್ತಿದೆ. ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ನಡೆದಿತ್ತು. ಹಲವು ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ ಬಳಿಕ ಎನ್‌ಐಎ ಕೋಲ್ಕತ್ತಾದಲ್ಲಿ ಏಪ್ರಿಲ್ 12 ರಂದು ಮಸ್ಸಾವೀರ್, ಅಬ್ಧುಲ್ ಮತೀನ್ ತಹಾ ಅವರನ್ನು ಬಂಧಿಸಿತ್ತು. ಸ್ಥಳೀಯ ಪೊಲೀಸರ ಭದ್ರತೆಯ ನಡುವೆ ಈಗ ಎನ್‌ಐಎ ಮಹಜರು ಪ್ರಕ್ರಿಯೆ ನಡೆಸುತ್ತಿದೆ.