Thursday, January 29, 2026
26.8 C
Bengaluru
Google search engine
LIVE
ಮನೆ#Exclusive Newsಆರ್​ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಾಚಾರ ; ಸಿಎಸ್​ಎಫ್​ಎಲ್ ವರದಿ

ಆರ್​ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಾಚಾರ ; ಸಿಎಸ್​ಎಫ್​ಎಲ್ ವರದಿ

ಕೋಲ್ಕತ್ತಾದ ಆರ್​ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಿಎಸ್​ಎಫ್​ಎಲ್ ವರದಿ ಮತ್ತೊಂದು ತಿರುವು ನೀಡಿದೆ. ಅಂದು ಅತ್ಯಾಚಾರ ನಡೆದಿದೆ ಎನ್ನಲಾದ ಸ್ಥಳದಲ್ಲಿ, ವೈದ್ಯೆ ನರಳಿರುವ, ಅಥವಾ ಆರೋಪಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಿರುವ ಯಾವುದೇ ಕುರುಹಿಲ್ಲ ಎಂಬುದು ತಿಳಿದುಬಂದಿದೆ. ಆಗಸ್ಟ್ 9 ರಂದು ಆರ್‌ಜಿ ಕರ್ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ವೈದ್ಯರ ಶವ ಪತ್ತೆಯಾಗಿದ್ದು , ಇದು ರಾಷ್ಟ್ರವ್ಯಾಪಿ ಆಕ್ರೋಶ ಮತ್ತು ಆರೋಗ್ಯ ವೃತ್ತಿಪರರಿಂದ ವಾರಗಳ ಪ್ರತಿಭಟನೆಗೆ ಕಾರಣವಾಯಿತು. ಆರೋಪಿ ಸಂಜಯ್ ರಾಯ್ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ.

ಸೆಮಿನಾರ್ ಹಾಲ್​ನಲ್ಲೇ ಅಪರಾಧ ಎಸಗಲಾಗಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ. ಬೇರೆಲ್ಲಾದರೂ ಕೊಲೆ ಮಾಡಿ ಆ ಪ್ರದೇಶಕ್ಕೆ ತಂದು ಎಸೆದಿರಬಹುದು ಎಂದು ಹೇಳಲಾಗುತ್ತಿದೆ.

ಕೇಂದ್ರೀಯ ವಿಧಿವಿಜ್ಞಾನ ಸಂಶೋಧನಾ ಪ್ರಯೋಗಾಲಯ (ಸಿಎಫ್‌ಎಸ್‌ಎಲ್) ವರದಿಯು ಘಟನಾ ಸ್ಥಳದಲ್ಲಿ ಮೃತರು ಮತ್ತು ದಾಳಿಕೋರ ನಡುವೆ ಯಾವುದೇ ಗಲಾಟೆ ಅಥವಾ ಹಲ್ಲೆ ನಡೆದಿರುವ ಲಕ್ಷಣಗಳು ಕಾಣುತ್ತಿಲ್ಲ ಎಂದಿದ್ದಾರೆ. ಸೆಮಿನಾರ್ ಕೊಠಡಿಯಲ್ಲಿಯೇ ಕಿರಿಯ ವೈದ್ಯರನ್ನು ಕೊಲೆ ಮಾಡಿ ಮತ್ತು ಹಲ್ಲೆ ಮಾಡಲಾಗಿದೆ ಎಂದು ವರದಿ ಮಾಡಲಾಗಿತ್ತು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments