Thursday, January 29, 2026
18 C
Bengaluru
Google search engine
LIVE
ಮನೆಸಿನಿಮಾವಿಜಯ್‌ ದೇವರಕೊಂಡ ಜೊತೆ ರಶ್ಮಿಕಾ ಮದುವೆ ಫಿಕ್ಸ್‌..!

ವಿಜಯ್‌ ದೇವರಕೊಂಡ ಜೊತೆ ರಶ್ಮಿಕಾ ಮದುವೆ ಫಿಕ್ಸ್‌..!

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥದ ವದಂತಿಗಳು ಹರಿದಾಡಿದ ಹಿನ್ನಲೆಯಲ್ಲಿ ಇದೀಗ ವಿಜಯ್ ದೇವರಕೊಂಡ ಜೊತೆ ನಿಶ್ಚಿತಾರ್ಥವಾದ ವಿಚಾರವನ್ನು ಪರೋಕ್ಷವಾಗಿ ಒಪ್ಪಿಕೊಂಡು ಅನೇಕ ದಿನಗಳಿಂದ ಹರಿದಾಡುತ್ತಿರುವ ಊಹಾಪೋಹ ಸುದ್ದಿಗಳಿಗೆ ತೆರೆ ಎಳಿದ್ದಾರೆ ರಶ್ಮಿಕಾ ಮಂದಣ್ಣ.

ಈ ಕುರಿತು ಮೌನವಾಗಿದ್ದ ರಶ್ಮಿಕಾ, “ಸಮಯ ಬಂದಾಗ ಹೇಳುತ್ತೇನೆ” ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಅವರ ಈ ಹೇಳಿಕೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಸದ್ಯ ಸಿನಿಮಾಗಳ ಯಶಸ್ಸಿನ ಅಲೆಯಲ್ಲಿರುವ ರಶ್ಮಿಕಾ, ವೈಯಕ್ತಿಕ ವಿಚಾರಗಳಲ್ಲೂ ಗಮನ ಸೆಳೆದಿದ್ದ ರಶ್ಮಿಕಾ. ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಜೋರಾಗಿ ಹರಿದಾಡಿದೆ. ಅಭಿಮಾನಿಗಳ ಎದುರು ಅವರು ನೀಡಿದ ಹೇಳಿಕೆ ಚರ್ಚೆಯನ್ನು ಹುಟ್ಟುಹಾಕಿದೆ. ರಶ್ಮಿಕಾಗೆ ಈಗಲೇ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ರಶ್ಮಿಕಾ ಮಂದಣ್ಣ ನಟನೆಯ ಹಿಂದಿ ಸಿನಿಮಾ ‘ಥಾಮಾ’ ಸೂಪರ್ ಹಿಟ್ ಆಗಿದೆ. ಈ ಚಿತ್ರ ನೂರು ಕೋಟಿ ರೂಪಾಯಿ ಕ್ಲಬ್ ಸೇರುವುದರಲ್ಲಿದೆ. ಇದಕ್ಕೆ ರಶ್ಮಿಕಾ ಉತ್ತರಿಸುವ ಗೋಜಿಗೆ ಹೋಗಿರಲಿಲ್ಲ. ಆದರೆ, ಈ ಬಾರಿ ರಶ್ಮಿಕಾ ಈ ವಿಚಾರಕ್ಕೆ ಸ್ಪಷ್ಟನೆ ಕೊಡುವ ಕೆಲಸ ಮಾಡಿದರು.ರಶ್ಮಿಕಾ ಮಂದಣ್ಣ ನಟನೆಯ‘ದಿ ಗರ್ಲ್ಫ್ರೆಂಡ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ರಶ್ಮಿಕಾಗೆ ಅಭಿಮಾನಿಗಳಿಂದಲೇ ಈ ಬಗ್ಗೆ ಪ್ರಶ್ನೆಗೆ ‘ನೀವು ಹಾಗೂ ವಿಜಯ್ ದೇವರಕೊಂಡ ಎಂಗೇಜ್ಮೆಂಟ್ ಮಾಡಿಕೊಂಡಿದ್ದೀರಂತೆ ಹೌದಾ’ ಎಂದು ಪ್ರಶ್ನೆ ಮಾಡಲಾಯಿತು.

ಆದರೆ, ಈ ವಿಚಾರವನ್ನು ರಶ್ಮಿಕಾ ಅಲ್ಲಗಳೆದಿಲ್ಲ. ಬದಲಿಗೆ, ‘ಸಮಯ ಬಂದಾಗ ಹೇಳುತ್ತೇನೆ’ ಎಂದಿದ್ದಾರೆ.
ರಶ್ಮಿಕಾ ಮಂದಣ್ಣ ನಾಚುತ್ತಲೇ ‘ಸಮು ಬಂದಾಗ ಹೇಳ್ತೀನಿ’ ಎಂದಿರೋದು ಸಾಕಷ್ಟು ಕುತೂಹಲ ಮೂಡಿಸಿದೆ. ಈ ವಿಚಾರವನ್ನು ಅವರು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ.ರಶ್ಮಿಕಾ ಮಂದಣ್ಣ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತಿದ್ದು, ಹಲವು ಸಿನಿಮಾಗಳು ಯಶಸ್ಸು ಕಂಡಿದೆ. ‘ದಿ ಗರ್ಲ್ಫ್ರೆಂಡ್’ ಚಿತ್ರದ ಬಗ್ಗೆಯೂ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಕನ್ನಡದವರೇ ಆದ ದೀಕ್ಷಿತ್ ಶೆಟ್ಟಿ ನಟಿಸಿದ್ದಾರೆ. ತೆಲುಗು ಜೊತೆಗೆ ಕನ್ನಡ ಮೊದಲಾದ ಭಾಷೆಗಳಲ್ಲೂ ಬಿಡುಗಡೆ ಕಾಣುತ್ತಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments