ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮಧ್ಯಾಹ್ನದ ಮನರಂಜನೆಯಾಗಿ ಆರಂಭವಾದ ‘ಸುವರ್ಣ ಗೃಹಮಂತ್ರಿ’ ಎಂಬ ಹೊಸ ಬಗೆಯ ರಿಯಾಲಿಟಿ ಶೋ ಈಗಾಗಲೇ ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಆದರೆ ಇದೀಗ ಮತ್ತಷ್ಟು ಮೆರುಗು ನೀಡಲು ಇದೇ ಮೊದಲ ಬಾರಿಗೆ ಸುವರ್ಣ ವಾಹಿನಿಯ ಮೂಲಕ ಖ್ಯಾತ ನಟ ರವಿಶಂಕರ್ ಕಿರುತೆರೆಗೆ ಪದಾರ್ಪಣೆ ಮಾಡಿದ್ದಾರೆ. ಇನ್ಮುಂದೆ ‘ಸುವರ್ಣ ಗೃಹಮಂತ್ರಿ’ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ನಟ ರವಿಶಂಕರ್ (Ravi Shankar) ಹೊರಲಿದ್ದಾರೆ. ವರ್ಷಗಳ ಬಳಿಕ ನಟ ರವಿ ಶಂಕರ್ ಅವರನ್ನು ಗೃಹಮಂತ್ರಿ ಪ್ರೋಮೋದಲ್ಲಿ ನೋಡಿದ ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಸಂತಸವನ್ನು ವ್ಯಕ್ತ ಪಡಿಸಿದ್ದು, ‘ಸುವರ್ಣ ಗೃಹಮಂತ್ರಿ’ಯ ಸಂಚಿಕೆಯಲ್ಲಿ ರವಿಶಂಕರ್ ರವರ ನಿರೂಪಣೆಯನ್ನು ನೋಡಲು ಕಾತುರತೆಯಿಂದ ಕಾಯುತ್ತಿದ್ದಾರೆ.