ಬೆಂಗಳೂರು: ನಾಳೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ವಿರುದ್ಧ ಗುಜರಾತ್ ಟೈಟನ್ಸ್ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.
ಆರ್ಸಿಬಿಗೆ ತವರಿನಲ್ಲಿ ಪಂದ್ಯ ನಡೆಯುತ್ತಿರುವ ಮೊದಲ ಪಂದ್ಯವಾಗಿದೆ. ರಜತ್ ಪಾಟೀದಾರ್ ನೇತೃತ್ವದಲ್ಲಿ ತಂಡಕ್ಕೆ ಹೊಸ ಕಳೆ ಬಂದಿದ್ದು, ಇಲ್ಲಿಯವರೆಗೆ ಆಡಿರುವ ಎರಡೂ ಪಂದ್ಯಗಳನ್ನೂ ಗೆದ್ದುಕೊಂಡಿದೆ. ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿದೆ.
ಇನ್ನು ಎಂ.ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ ಮ್ಯಾಚ್ ನೋಡಲು ಆರ್ಸಿಬಿ ಫ್ಯಾನ್ಸ್ ಕಾತೂರದಿಂದ ಕಾಯ್ತಿದ್ದಾರೆ. ಈಗಾಗಲೇ ಬಹುತೇಕ ಟಿಕೇಟ್ಗಳು ಸೇಲ್ ಆಗಿದೆ. ಇನ್ನೇನು ಹೈವೋಲ್ಟೇಜ್ ಮ್ಯಾಚ್ನಲ್ಲಿ ಆರ್ಸಿಬಿ ಗೆಲುವಿಗೆ ಫ್ಯಾನ್ಸ್ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಸುತ್ತಿದ್ದಾರೆ.