ರಾಜಕೀಯ

ಸಂಪುಟ ವಿಸ್ತರಣೆ ಬೆನ್ನಲ್ಲೇ ʻಕೈʼ ಪಾಳಯದಲ್ಲಿ ಭುಗಿಲೆದ್ದ ಬಂಡಾಯ!

Rebellion breaks out in the 'KAI' camp following cabinet expansion

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕಳೆದ ಎರಡು ತಿಂಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕೊನೆಗೂ ಅಂತ್ಯಗೊಂಡಿದೆ. ಸಂಪುಟ ರಚನೆ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಹಿರಿಯ ಶಾಸಕರಿಗೆ ಹೈಕಮಾಂಡ್‌ ಕೊಕ್‌ ನೀಡಿರುವುದು ಮತ್ತು ಹಲವು ಪ್ರಮುಖರಿಗೆ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಕೈ ನಾಯಕರು ಬಂಡಾಯವೆದ್ದಿದ್ದಾರೆ.

ಡಿ.ಕೆ. ಶಿವಕುಮಾರ್‌ ನೇತೃತ್ವದ ಸರ್ಕಾರದ ಈ ಸಂಪುಟ ವಿಸ್ತರಣೆಯಲ್ಲಿ ಸಿದ್ದು ಸಂಪುಟದಲ್ಲಿದ್ದ 10ಕ್ಕೂ ಹೆಚ್ಚು ಹಿರಿಯ ನಾಯಕರಿಗೆ ಮಂತ್ರಿಗಿರಿ ಸಿಕ್ಕಿಲ್ಲ. ಹೈಕಮಾಂಡ್‌ನ ಈ ದಿಢೀರ್ ನಿರ್ಧಾರದಿಂದ ಹಿರಿಯ ನಾಯಕರಿಗೆ ಬಿಗ್ ಶಾಕ್ ಎದುರಾಗಿದೆ.

ಅಲ್ಲದೆ, ತಮ್ಮ ಬೆಂಬಲಿಗ ಹಾಗೂ ಆಪ್ತ ನಾಯಕ ಬಸವರಾಜ ಶಿವಣ್ಣ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗದಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತೀವ್ರವಾಗಿ ಗರಂ ಆಗಿದ್ದಾರೆ ಎನ್ನಲಾಗುತ್ತಿದೆ. ನಿನ್ನೆ ನಡೆದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಸಿದ್ದರಾಮಯ್ಯ ಗೈರುಹಾಜರಾಗಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಮಂತ್ರಿಗಿರಿ ಸಿಗದಿದ್ದಕ್ಕೆ ಯಶವಂತರಾಯಗೌಡ, ಬೇಳೂರು ಗೋಪಾಲಕೃಷ್ಣ, ಟಿ.ಬಿ.ಜಯಚಂದ್ರ, ಬಿ.ಕೆ.ಸಂಗಮೇಶ್, C.S.ನಾಡಗೌಡ, ತನ್ವೀರ್ ಸೇಠ್, ಎಂ.ಕೃಷ್ಣಪ್ಪ, ಪ್ರಿಯಕೃಷ್ಣ, ಬಸವರಾಜ ಶಿವಣ್ಣ, ಪ್ರಸಾದ್ ಅಬ್ಬಯ್ಯ, ಹೆಬ್ಬಾಳ್ಕರ್, ರಾಘವೇಂದ್ರ ಹಿಟ್ನಾಳ್, ಹಂಪಣ್ಣಗೌಡ ಬಾದರ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Comments (0)

Your email address will not be published. Required fields are marked *

Back to top button