Wednesday, January 28, 2026
20.2 C
Bengaluru
Google search engine
LIVE
ಮನೆರಾಜ್ಯಯಲ್ಲಮ್ಮ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ

ಯಲ್ಲಮ್ಮ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ

ಬೆಳಗಾವಿ: ಯಲ್ಲಮ್ಮನ ಹುಂಡಿಯಲ್ಲಿ ಕಳೆದ ಮೂರು ತಿಂಗಳಲ್ಲಿ 3.68 ಕೋಟಿ ರೂ. ನಗದು ಕಾಣಿಕೆ ಸಂಗ್ರಹವಾಗಿದೆ.

ಪ್ರತಿಬಾರಿ ಎಣಿಕೆ ನಡೆದಾಗ ರೂ. 1 ಕೋಟಿಯಿಂದ ರೂ. 1.5 ಕೋಟಿಯವರೆಗೆ ಕಾಣಿಕೆ ಸಂಗ್ರಹವಾಗುತ್ತಿತ್ತು. ಆದರೆ, ಈ ಬಾರಿ ರೂ. 4 ಕೋಟಿ ಸಮೀಪದವರೆಗೆ ಸಂಗ್ರಹವಾಗಿದ್ದು ದಾಖಲೆಯಾಗಿದೆ.

2024ರ ಡಿಸೆಂಬರ್ 14ರಿಂದ 2025ರ ಮಾರ್ಚ್ 12ರವರೆಗೆ ಯಲ್ಲಮ್ಮ ದೇವಸ್ಥಾನ ಮತ್ತು ಇತರೆ ಪರಿವಾರದ ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾದ ಹಣ ಇದಾಗಿದೆ. ಇದಲ್ಲದೇ, ರೂ. 20.82 ಲಕ್ಷ ಮೌಲ್ಯದ ಚಿನ್ನಾಭರಣ, ರೂ. 6.39 ಲಕ್ಷ ಮೌಲ್ಯದ ಬೆಳ್ಳಿ ಆಭರಣಗಳನ್ನು ಭಕ್ತರು ಸಮರ್ಪಿಸಿದ್ದಾರೆ.

ವಿಶೇಷವೆಂದರೆ ಈ ಹುಂಡಿಯಲ್ಲಿ ಅಮೆರಿಕ, ನೆದರ್‌ಲ್ಯಾಂಡ್ ಮೊದಲಾದ ದೇಶಗಳ ಕರೆನ್ಸಿಗಳೂ ಪತ್ತೆಯಾಗಿವೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments