Thursday, May 1, 2025
24.9 C
Bengaluru
LIVE
ಮನೆ#Exclusive NewsTop Newsಕೇರಳದಿಂದ ಕರ್ನಾಟಕ ಕೆಂಪುದಳ ಶಿಫ್ಟ್​.? ಪಶ್ಚಿಮಘಟಗಳಲ್ಲಿ ನಕ್ಸಲರಿಗಾಗಿ ANF ಶೋಧ..!

ಕೇರಳದಿಂದ ಕರ್ನಾಟಕ ಕೆಂಪುದಳ ಶಿಫ್ಟ್​.? ಪಶ್ಚಿಮಘಟಗಳಲ್ಲಿ ನಕ್ಸಲರಿಗಾಗಿ ANF ಶೋಧ..!

ಚಿಕ್ಕಮಗಳೂರು : ದಶಕದಿಂದ ನಕ್ಸಲರ ಸದ್ದಿಲ್ಲದೆ ಮೌನವಾಗಿದ್ದ ಮಲೆನಾಡಿನಲ್ಲಿ, ಮತ್ತೆ ಪ್ರತ್ಯೇಕ್ಷವಾದ ಕೆಂಪುದಳ.. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ಗುಂಡಿನ ಸದ್ದು.. ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ, ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ನಕ್ಸಲ್‌ ನಾಯಕನ ಎನ್‌ಕೌಂಟರ್‌ ಮಾಡಲಾಗಿತ್ತು.

ಪಶ್ಚಿಮ ಘಟ್ಟದ ಹಸಿರುವ ತಪ್ಪಲಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದ್ದು, ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ನಕ್ಸಲ್‌ ಕಾರ್ಯಕರ್ತ ವಿಕ್ರಂ ಗೌಡನನ್ನುಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಲಾಗಿದೆ. ನಕ್ಸಲ್‌ ನಿಗ್ರಹ ದಳ ಮತ್ತು ನಕ್ಸಲರ ಮಧ್ಯೆ ಕಳೆದ ಸೋಮವಾರ ಸಂಜೆ ಗುಂಡಿನ ಕಾಳಗ ನಡೆದಿದೆ. ಈ ಘಟನೆಯಲ್ಲಿ ಓರ್ವ ಹತನಾಗಿದ್ದಾನೆ.. ಇನ್ನು ಕಳೆದ 15 ದಿನಗಳಿಂದ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡದ ಅರಣ್ಯ ಭಾಗದಲ್ಲಿ ಎಎನ್‌ಎಫ್‌ ಕೂಂಬಿಂಗ್ ನಡೆಸುತ್ತಿದೆ.

ಕಳೆದ ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಎಎನ್‌ಎಫ್‌ ಮೇಲೆ ದಾಳಿ ನಡೆಸಿದ್ದಾರೆ. ದಾಳಿ-ಪ್ರತಿದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಉಳಿದವರು ಪರಾರಿಯಾಗಿದ್ದು ಶೋಧ ಕಾರ್ಯ ನಡೆಸಲಾಯಿತ್ತು. ಕೆಲ ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲ ಮನೆಗಳಿಗೆ ನಕ್ಸಲರು ಭೇಟಿ ನೀಡಿದ್ದರು. ಕೊಪ್ಪ ತಾಲೂಕಿನ ಯಡಗುಂದ ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿ, ಅರಣ್ಯ ಒತ್ತುವರಿ ಮತ್ತು ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಚರ್ಚಿಸಿದ್ದರು ಎನ್ನಲಾಗುತ್ತಿದೆ.

ಕಳೆದ ಲೋಕಸಭಾ ಚುನಾವಣೆ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮನೆಗೆ ನಕ್ಸಲರು ಬಂದಿದ್ದ ಶಂಕೆ ವ್ಯಕ್ತವಾಗಿತ್ತು. ಕೊಂಬಾರು ಗ್ರಾಮದ ಚೆರು ಗ್ರಾಮದ ಮನೆಗೆ ತಡರಾತ್ರಿ ಬಂದ 6 ಮಂದಿ ಎರಡು ಗಂಟೆಗಳ ಕಾಲ ಇದ್ದು ಮನೆಯಲ್ಲಿ ಊಟ ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದ ಮಾಹಿತಿ ಲಭ್ಯವಾಗಿತ್ತು. ಈ ವಿಚಾರ ತಿಳಿದ ಬೆನ್ನಲ್ಲೇ ನಕ್ಸಲ್‌ ನಿಗ್ರಹ ದಳ ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿತ್ತು.

ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಹೆಚ್ಚಾಗಿದೆ. ಉಡುಪಿ ಜಿಲ್ಲೆಯ ಕಬ್ಬಿನಾಲೆಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡನ ಎನ್‌ಕೌಂಟರ್ ಆಗಿದೆ. ಸರ್ಕಾರ ಹಲವು ಬಾರಿ ನಕ್ಸಲ್ ಶರಣಾಗತಿಗೆ ಯೋಜನೆಗಳನ್ನು ಘೋಷಿಸಿದೆ. ಅದರಲ್ಲಿ ಕೆಲವರು ಶರಣಾಗಿದ್ದಾರೆ. ಆದರೆ, ಕೆಲವರು ಶರಣಾಗಲು ನಿರಾಕರಿಸಿದ್ದಾರೆ. ಕರ್ನಾಟಕದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ತೀವ್ರಗೊಂಡಿದ್ದು, ನಕ್ಸಲ್ ನಿಗ್ರಹ ಕಾರ್ಯಾಚರಣೆಯೂ ಚುರುಕುಪಡೆದಿದೆ. ಉಡುಪಿಯ ಹೆಬ್ರಿ ಬಳಿಯ ಕಬ್ಬಿನಾಲೆಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಎನ್​ಕೌಂಟರ್ ಮಾಡಲಾಗಿದ್ದು, ಪರಾರಿಯಾದ ನಾಲ್ವರು ನಕ್ಸಲರಿಗಾಗಿ ಶೋಧ ಕಾರ್ಯ ಪ್ರಗತಿಯಲ್ಲಿದೆ.

ನಕ್ಸಲರು ಶರಣಾಗಲು ಹಲವು ಬಾರಿ ರಾಜ್ಯ ಸರ್ಕಾರ ಅವಕಾಶ ನೀಡಿತ್ತು. ಶರಣಾಗುವ ನಕ್ಸಲರಿಗೆ ಪುನರ್ವಸತಿ ಪ್ಯಾಕೇಜ್ ಘೋಷಿಸಿತ್ತು. ಆ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಲು ನಕ್ಸಲರಿಗೂ ಸರ್ಕಾರ ಅವಕಾಶ ನೀಡಿತ್ತು. ಅದಕ್ಕಾಗಿ ಗೌರಿ ಲಂಕೇಶ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿತ್ತು. ಕರ್ನಾಟಕ ಸರ್ಕಾರದ ಪ್ಯಾಕೇಜ್​ಗೆ ಒಪ್ಪಿ 7 ಮಂದಿ ನಕ್ಸಲರು ಶರಣಾಗಿದ್ದರು. 2013-14 ರಲ್ಲಿ ಕಾಂಗ್ರೆಸ್ ಸರ್ಕಾರ ಪ್ಯಾಕೇಜ್ ಘೋಷಿಸಿತ್ತು. ಅದೇ ವರ್ಷ ನಕ್ಸಲರಾದ ನೂರ್ ಶ್ರೀಧರ್, ಸಿರಿಮನೆ ನಾಗರಾಜು ಶರಣಾಗಿದ್ದರು. 2014-15ರಲ್ಲಿ ನೀಲಗುಳಿ ಪದ್ಮನಾಭ, ರೇಣುಕಾ ದಂಪತಿ ಶರಣಾಗಿದ್ದರು. 2017ರಲ್ಲಿ ಚೆನ್ನಮ್ಮ, ಕನ್ಯಾಕುಮಾರಿ, ಶಿವು ಶರಣಾಗಿದ್ದರು. ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದರು.

ಆದ್ರೆ ಶರಣಾಗತಿಯನ್ನು ವಿರೋಧಿಸಿದ್ದ ನೇತ್ರಾವತಿ ದಳದ ನಕಲ್ಸ್​ ನಾಯಕ ಮೃತ ವಿಕ್ರಂ ಗೌಡ, ಮುಂಡಗಾರು ಲತಾ ಕೇರಳ, ತಮಿಳುನಾಡು ಅರಣ್ಯ ಪ್ರದೇಶದತ್ತ ತೆರಳಿದ್ದರು. ಸರ್ಕಾರ ಸಾಲು ಸಾಲು ಅವಕಾಶ ನೀಡಿದ್ದರೂ ಬಂದೂಕು ತ್ಯಜಿಸಿರಲಿಲ್ಲ. ಶರಣಾಗತಿ ಎಂಬುದು ನಕ್ಸಲ್ ಸಿದ್ಧಾಂತಕ್ಕೆ ವಿರುದ್ಧವಾದದ್ದು ಎಂದು ವಿಕ್ರಂ ಗೌಡ ನಂಬಿದ್ದ.

2006 ಆಗಸ್ಟ್ 23: ಶೃಂಗೇರಿಯ ಕೆರೆಕಟ್ಟೆ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಕಚೇರಿ ಮೇಲೆ ನಕ್ಸಲ್ ದಾಳಿ. ಕೆಲದಿನದ ಬಳಿಕ ಕಾರ್ಕಳ ಮುನಿಯಾಲು ಮುಟ್ಲುಪಾಡಿಯಲ್ಲಿ ಸದಾನಂದ ಶೆಟ್ಟಿ ಅವರ ಬೈಕ್​ಗೆ ಬೆಂಕಿ ಹಚ್ಚಿ ನಕ್ಸಲರಿಂದ ಬೆದರಿಕೆ.

2006 ಡಿಸೆಂಬರ್ 25: ಶೃಂಗೇರಿ ಬಳಿಯ ಕಿಗ್ಗದಲ್ಲಿ ನಕ್ಸಲ್ ದಿನಕರ ಎನ್ಕೌಂಟರ್​ಗೆ ಬಲಿ.

2007 ಮಾರ್ಚ್ 13: ಶಂಕಿತ ನಕ್ಸಲ ಯುವತಿ ಚೆನ್ನಮ್ಮ ಅಮಾಸೆಬೈಲಿನಲ್ಲಿ ಸೆರೆ.

2007 ಜೂನ್ 3: ಶೃಂಗೇರಿ ಕಿಗ್ಗ ಸಮೀಪ ಗುಂಡಘಟ್ಟದಲ್ಲಿ ನಕ್ಸಲರಿಂದ ಅಂಗಡಿ ಮಾಲೀಕ ವೆಂಕಟೇಶ ಹತ್ಯೆ. ಜೂನ್ 7: ಆಗುಂಬೆ ತಲ್ಲೂರಂಗಡಿ ಬಳಿ ಕೆಎಸ್ಆರ್ಟಿಸಿ ಬಸ್​ಗೆ ಬೆಂಕಿ.

2007 ಜುಲೈ 10: ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಪಂ ವ್ಯಾಪ್ತಿಯ ಒಡೆಯರಮಠದಲ್ಲಿ ಪೊಲೀಸ್ ಎನ್ಕೌಂಟರ್ ಗೆ ನಕ್ಸಲ್ ಯುವಕ ಸಿಂಧನೂರಿನ ಗೌತಮ್, ರಾ.ಉದ್ಯಾನ ವಿರೋಧಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪರಮೇಶ್ವರ, ಕಾರ್ಮಿಕ ಸುಂದರೇಶ್, ಮನೆಯ ಯಜಮಾನರಾದ ರಾಮೇಗೌಡ್ಲು, ಕಾವೇರಿ ಬಲಿ.

2007 ಜುಲೈ 17: ಆಗುಂಬೆ ಸಮೀಪದ ಹುಲ್ಲಾರಬೈಲಿನಲ್ಲಿ ಗುಂಡಿನ ಚಕಮಕಿ, ಎಸ್ಐ ವೆಂಕಟೇಶ ಹತ್ಯೆ.

2008 ಮೇ 15: ಹೆಬ್ರಿ ಸಮೀಪದ ಸೀತಾನದಿ ಬಳಿ ನಕ್ಸಲರ ಗುಂಡಿಗೆ ಶಿಕ್ಷಕ ಭೋಜ ಶೆಟ್ಟಿ ಹಾಗೂ ಅವರ ಗೆಳೆಯ ಕೃಷಿಕ ಸುರೇಶ್ ಶೆಟ್ಟಿ ಬಲಿ.

2008 ಜುಲೈ 7: ಬೆಳ್ತಂಗಡಿ ತಾಲೂಕಿನ ಕುತ್ಲೂರು ಹಾಗೂ ಕಾರ್ಕಳದ ತಿಂಗಳಮಕ್ಕಿಯಲ್ಲಿ ನಕ್ಸಲರ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಪತ್ತೆ.

2008 ನವೆಂಬರ್ 13: ಶಿವಮೊಗ್ಗದಲ್ಲಿ ಶಂಕಿತ ನಕ್ಸಲ್ ಜನಾರ್ದನ ಬಂಧನ, ನಕ್ಸಲರು ಬಚ್ಚಿಟ್ಟ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಸ್ಪೋಟಕ ವಶ.

2008 ನವೆಂಬರ್ 20: ಹೊರನಾಡು ಸಮೀಪ ಮಾವಿನಹೊಲ ಬಳಿ ಎನ್ಕೌಂಟರ್. ನಕ್ಸಲರಾದ ಸೊರಬದ ಮನೋಹರ್, ಸಹಚರರಾದ ನವೀನ್, ಅಭಿಲಾಷ್ ಹತ್ಯೆ, ಪೇದೆ ಗುರುಪ್ರಸಾದ್ ಸಾವು.

2008 ಡಿಸೆಂಬರ್ 7: ಹಳ್ಳಿಹೊಳೆ ಸಮೀಪದ ಕೃಷಿಕ ಜಮೀನ್ದಾರ ಕೇಶವ ಯಡಿಯಾಳರನ್ನು ಪೊಲೀಸರ ಮಾಹಿತಿದಾರನೆಂಬ ಆರೋಪದಲ್ಲಿ ಮನೆಗೆ ನುಗ್ಗಿ ನಕ್ಸಲರು ಹತ್ಯೆಗೈದರು.

2009 ಆಗಸ್ಟ್ 22: ಕಿಗ್ಗ ಎನ್ಕೌಂಟರ್, ಎರಡು ದಿನಗಳ ಬಳಿಕ ಶೃಂಗೇರಿಯ ನೆಮ್ಮಾರಿನ ದಿಂಡೋಡಿಯಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಪೊಲೀಸರ ವಶ.

2010 ಮಾರ್ಚ್ 1: ಕಾರ್ಕಳ ತಾಲೂಕಿನ ಮುನಿಯಾಲು ಮುಟ್ಲುಪಾಡಿಯ ಮೈರೋಳಿ ಎಂಬಲ್ಲಿ ಪೊಲೀಸರ ಎನ್ಕೌಂಟರ್ ಗೆ ಬೆಳ್ತಂಗಡಿ ತಾಲೂಕು ಕುತ್ಲೂರಿನ ವಸಂತ ಗೌಡ್ಲು ಯಾನೆ ಆನಂದ ಹತ್ಯೆ.

2011 ಅಗಸ್ಟ್ 9: ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಪಂ ವ್ಯಾಪ್ತಿಯ ನಾವೂರ ಗ್ರಾಮದ ಮಂಜಲದಲ್ಲಿ ಬೆಳಗಿನ ಜಾವ ನಕ್ಸಲ್ ನಿಗ್ರಹದಳದ ಪೊಲೀಸರ ಗನ್ ಮಿಸ್ ಫೈರ್ ಆಗಿ ಎಎನ್ಎಫ್ ಸಿಬ್ಬಂದಿ ಮಹಾದೇವ ಮಾನೆ ಬಲಿ.

2011 ಡಿಸೆಂಬರ್ 19: ಹೆಬ್ರಿ ಕಬ್ಬಿನಾಲೆ ಸಮೀಪದ ತಿಂಗಳ ಮಕ್ಕಿಯ ಸದಾಶಿವ ಗೌಡ (49) ತೆಂಗಿನಮಾರು ಮನೆಯಿಂದ ನಾಪತ್ತೆ, 22ರಂದು ವಿಷಯ ಬಹಿರಂಗ. ಶಂಕಿತ ನಕ್ಸಲ್ ವಿಶ್ವನಿಂದ ಪತ್ರಕರ್ತರಿಗೆ ಮಾಹಿತಿ.

2011 ಡಿಸೆಂಬರ್ 28: ತೆಂಗಿನಮಾರುವಿನಿಂದ ಎರಡು ಕಿ.ಮೀ. ದೂರ ದಟ್ಟಾರಣ್ಯದಲ್ಲಿ ಸದಾಶಿವ ಗೌಡ ಎಂಬವರ ಶವ ಕೈಕಾಲು ಕಟ್ಟಿ ಸ್ಥಿತಿಯಲ್ಲಿ ಗೋಳಿಮರದಡಿ ಪತ್ತೆ. ನಕ್ಸಲರ ಬರಹವೂ ಸಮೀಪದಲ್ಲಿ ದೊರಕಿತ್ತು.

2024 ನವೆಂಬರ್ 18: ಕಾರ್ಕಳ ತಾಲೂಕಿನ ಹೆಬ್ರಿಯ ಪೀತಬೈಲುವಿನಲ್ಲಿ ಎಎನ್​​ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ.

ಉಡುಪಿ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಹತ್ಯೆಯಾಗಿದ್ದಾನೆ. ಈತ ಕರ್ನಾಟಕ, ಕೇರಳ ಮತ್ತು ತಮಿಳುನಾಡು ಪೊಲೀಸರಿಗೆ ಬೇಕಾಗಿದ್ದ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿರೋಧಿ ಹೋರಾಟದಿಂದ ನಕ್ಸಲಿಸಂಗೆ ವಿಕ್ರಂ ಗೌಡ ಸೇರಿದ. ನಕ್ಸಲರು ಪರಾರಿಯಾದ ಸ್ಥಳದಲ್ಲಿ ಶಸ್ತ್ರಾಸ್ತ್ರ ಪತ್ತೆಯಾಗಿತ್ತು. 3 ಎಸ್​ಬಿಎಂಎಲ್ ಬಂದೂಕು, ಮದ್ದುಗುಂಡು ಪತ್ತೆಯಾಗಿತ್ತು. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೇಗೌಡ ಎಂಬವರ ಮನೆಗೆ ಬಂದಿದ್ದ ಶಸ್ತ್ರಸಜ್ಜಿತ ನಕ್ಸಲರ ತಂಡ, ಕಡೆಗುಂಡಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಪರಾರಿಯಾಗಿದ್ದರು. ನಾಪತ್ತೆಯಾದ ಮುಂಡಗಾರು ಲತಾ ತಂಡಕ್ಕಾಗಿ ಶೋಧ ಕಾರ್ಯ ಮಾಡಲಾಯಿತ್ತು.

https://www.youtube.com/watch?v=UO0pHcySaKo

ನಕ್ಸಲ್ ನಿಗ್ರಹ ಪಡೆ ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆಸಿದ ಎನ್​ಕೌಂಟರ್​ನಲ್ಲಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತ್ಯೆಯಾಗಿದ್ದಾನೆ. ಈತ ಕರ್ನಾಟಕ, ಕೇರಳ, ತಮಿಳುನಾಡು ಪೊಲೀಸರಿಗೆ ಸುಮಾರು 69ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ ಎನ್ನಲಾಗುತ್ತಿದೆ. ನಕ್ಸಲ್ ಚಟುವಟಿಕೆಗಳ ಸಂಬಂಧ ವಿಕ್ರಂ ಗೌಡ ಮೇಲೆ ಈ ಹಿಂದೆ ಹಲವು ಪ್ರಕರಣಗಳು ದಾಖಲಾಗಿದ್ದವು.

ವಿಕ್ರಂ ಗೌಡ ನಕ್ಸಲರ ನೇತ್ರಾವತಿ ದಳದ ನಾಯಕ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ. ಆ ಸಂದರ್ಭದಲ್ಲಿ ನಕ್ಸಲ್​ ಚಳವಳಿಗೆ ಧುಮುಕಿದ್ದ ವಿಕ್ರಂ ಗೌಡ, ನಂತರದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ. ನಕ್ಸಲ್ ಹೋರಾಟದ ವೇಳೆ ಕರಾವಳಿ ಭಾಗದಲ್ಲಿ ನೇತ್ರಾವತಿ ದಳವನ್ನು ಮುನ್ನೆಡೆಸಿದ್ದ. ಮತ್ತೊಂದೆಡೆ, ಮಲೆನಾಡು ಭಾಗದಲ್ಲಿ ಮುಂಡಗಾರು ಲತಾ ತಂಡ ಸಕ್ರಿಯವಾಗಿದೆ.

ಮೂರು ಬಾರಿ ಕರ್ನಾಟಕ ಪೊಲೀಸರಿಂದ ತಪ್ಪಿಸಿಕೊಂಡಿದ್ದ ವಿಕ್ರಂ ಗೌಡ, ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ವಿಕ್ರಂ ಗೌಡ ಉಡುಪಿ ಹೆಬ್ರಿ ತಾಲೂಕಿನ ಕೂಡ್ಲು ನಾಡ್ವಾಲು ಗ್ರಾಮ ಮೂಲದವ. ದಕ್ಷಿಣ ಭಾರತದಲ್ಲಿ ನಕ್ಸಲ್ ಸಂಘಟನೆಯ ನಾಯಕತ್ವವನ್ನು ತಮಿಳುನಾಡು ಮೂಲದ ಕುಪ್ಪುಸ್ವಾಮಿ ವಹಿಸಿಕೊಂಡಿದ್ದರೆ, ಕರ್ನಾಟಕದಲ್ಲಿನ ಜವಾಬ್ದಾರಿ ವಿಕ್ರಂ ಗೌಡ ಹೆಗಲಿಗೆ ಬಿದ್ದಿತ್ತು. 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿರುವ ವಿಕ್ರಂ ಗೌಡ ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಶಾಮೀಲಾಗಿದ್ದಾನೆ.

ಕಾರ್ಮಿಕ ಸಂಘಟನೆಯ ಹಿನ್ನೆಲೆಯಿಂದ ಬಂದಿದ್ದ ವಿಕ್ರಂ ಗೌಡ ಮೂರು ಬಾರಿ ಕರ್ನಾಟಕ ಪೊಲೀಸರ ಕೈಯಿಂದ ಪರಾರಿಯಾಗಿದ್ದ. 2016ರಲ್ಲಿ ಕೇರಳ ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸಿದ್ದ. ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಸರ್ಕಾರದ ಯೋಜನೆಗೆ ವಿಕ್ರಂ ಗೌಡ ವಿರೋಧ ಹೊಂದಿದ್ದ. ಅಷ್ಟೇ ಅಲ್ಲದೇ ಈ ಯೋಜನೆಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದ್ದಕ್ಕೆ ಗೌರಿ ಲಂಕೇಶ್ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಿತ್ತಿಪತ್ರಗಳನ್ನೂ ಕೂಡ ಹಂಚಿದ್ದ.

ನಕ್ಸಲರ ಪತ್ತಗೆ ಪೋಲಿಸ್ ಇಲಾಖೆ ಹತ್ತು ವರ್ಷಗಳ ಹಿಂದೆಯೇ 5 ಲಕ್ಷ ರೂ. ಬಹುಮಾನ ಘೋಷಣೆ ಮಾಡಿತ್ತು. ವಿಕ್ರಂ ಗೌಡ, ಮುಂಡಗಾರು ಲತಾ, ಜಯಣ್ಣ, ವನಜಾಕ್ಷಿ, ಸುಂದರಿ ಪತ್ತೆಗೆ 5 ಲಕ್ಷ ಬಹುಮಾನ ಘೋಷಣೆ ಮಾಡಲಾಗಿತ್ತು. ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಹೇಳಿತ್ತು. ಕಳೆದ 18 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ ವಿಕ್ರಂ ಗೌಡ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲೇ 13 ಪ್ರಕರಣ ದಾಖಲಾಗಿದ್ದವು. ಕರ್ನಾಟಕ ತಮಿಳುನಾಡು, ಕೇರಳದ ರಾಜ್ಯದಲ್ಲಿ 50 ಕ್ಕೂ ಹೆಚ್ಚು ಕೇಸ್ ದಾಖಲಾಗಿದ್ದವು.

ಕೇರಳದಲ್ಲಿ ಕೂಡ ಇತ್ತೀಚೆಗೆ ನಕ್ಸಲ್ ಚಟುವಟಿಕೆ ಹೆಚ್ಚಾಗಿತ್ತು. ಅದರ ಬೆನ್ನಲ್ಲೇ ಅಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯೂ ಚುರುಕಾಗಿತ್ತು. ನಂತರ ಅಲ್ಲಿಂದ ಕಾಲ್ಕಿತ್ತಿದ್ದ ನಕ್ಸಲರು, 2 ತಿಂಗಳುಗಳ ಹಿಂದೆ ಕರ್ನಾಟಕಕ್ಕೆ ಆಗಮಿಸಿದ್ದರು.

ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟ ಸಾಲಿನ ಗ್ರಾಮಗಳು ಹಾಗೂ ಚಿಕ್ಕಮಗಳೂರಿನ ಹಲವೆಡೆ ಇತ್ತೀಚೆಗೆ ನಕ್ಸಲರು ಸಭೆ ನಡೆಸಿದ್ದರು. ಕಸ್ತೂರಿ ರಂಗನ್​​ ವರದಿ ಜಾರಿ, ಅರಣ್ಯ ಒತ್ತುವರಿ ತೆರವು ಸಂಬಂಧ ಸಭೆ ನಡೆಸಿದ್ದರು. ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ಜಿಲ್ಲೆಯ ನಕ್ಸಲ್​ಪೀಡಿತ ಪ್ರದೇಶಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿತ್ತು. ನಕ್ಸಲ್ ನಿಗ್ರಹ ಪಡೆಯಿಂದ ಕಾರ್ಯಾಚರಣೆ ಕೂಡ ಮುಂದುವರಿದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಘೋಷಣೆ ವಿರೋಧಿಸಿ ಹುಟ್ಟಿಕೊಂಡಿದ್ದ ನಕ್ಸಲ್ ಚಳುವಳಿ, ನಂತರ ಕರ್ನಾಟಕದ ವಿವಿಧ ಭಾಗಗಳಲ್ಲಿ ದಶಕಗಳ ಕಾಲ ಆತಂಕ ಸೃಷ್ಟಿ ಮಾಡಿತ್ತು. ಆದರೆ, ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಘೋಷಣೆಯಾದ ಬಳಿಕ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಕ್ಸಲ್ ಚಳವಳಿಗೆ ಹೆಚ್ಚಿನ ಬೆಂಬಲ‌ ಸಿಕ್ಕಿರಲಿಲ್ಲ. ಹೀಗಾಗಿ ಪಕ್ಕದ ರಾಜ್ಯ ಕೇರಳಕ್ಕೆ ನಕ್ಸಲರು ಸ್ಥಳಾಂತರಗೊಂಡಿದ್ದರು.

ಸದ್ಯ ಪೊಲೀಸರ ಎನ್ಕೌಂಟರ್​ ನಿಂದ ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಬಿರುಸುಗೊಂಡಿರೋದು ಮುನ್ನೆಲೆಗೆ ಬಂದಿದೆ..
ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಆರಂಭಿಸಿತ್ತು.

ಕಬ್ಬಿನಾಲೆ ಅರಣ್ಯದಲ್ಲಿ ನಡೆದ ಎನ್​ಕೌಂಟರ್​ನೊಂದಿಗೆ ಉಡುಪಿ ಭಾಗದಲ್ಲಿ 13 ವರ್ಷಗಳ ನಂತರ ಗುಂಡಿನ ಮೊರತೆ ಕೇಳಿದಂತಾಗಿದೆ. ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್​ಕೌಂಟರ್​​ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾದರು. ನಂತರ ನಕ್ಸಲರ್ ನಿಗ್ರಹ ಪಡೆ ಕಾರ್ಯಾಚರಣೆ ತೀವ್ರಗೊಳಿಸಿದೆ. ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿತ್ತು. ಇದೇ ಕಾರಣದಿಂದ ಮಲೆನಾಡು ಹಾಗೂ ಕರವಾಳಿ ಭಾಗದ ಪಶ್ಚಿಮ ಘಟ್ಟದ ಅಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಹೆಚ್ಚಾಗುತ್ತಿರುವ ಅನುಮಾನ ಇದೆ.

ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ವಿಕ್ರಂನನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ವಿಕ್ರಂ ತಪ್ಪಿಸಿಕೊಂಡು ಓಡಾಡುತ್ತಿದ್ದ. ಅನೇಕ ಎನ್‌ಕೌಂಟರ್‌ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ. ಸೋಮವಾರ ಸಂಜೆ ವಿಕ್ರಂ ಗೌಡ ಎನ್‌ಕೌಂಟರ್ ಆಗಿದೆ. ಸೋಮವಾರ ಪೊಲೀಸರ ಮೇಲೆ ವಿಕ್ರಂ ಶೂಟ್ ಮಾಡಿದ್ದ. ಪೊಲೀಸರು ಪ್ರತಿದಾಳಿ ನಡೆಸಿ ಎನ್‌ಕೌಂಟರ್ ಮಾಡಿದ್ದಾರೆ. ವಿಕ್ರಂ ಜೊತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದಾರೆ. ಆ ಭಾಗದಲ್ಲಿ ಕೂಂಬಿಂಗ್ ಮುಂದುವರಿದಿದೆ.

ವಿಕ್ರಂ ಗೌಡ ಚಲನವಲನಗಳನ್ನು ಪೊಲೀಸರು ಗಮನಿಸುತ್ತಿದ್ದು, ಆತನ ಮೇಲೆ ನಿಗಾ ಇಟ್ಟಿದ್ದರು. ಈಗ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ನಕ್ಸಲ್ ಕಾಲ ಮುಗೀತು ಅಂದುಕೊಂಡಿದ್ದೆವು. ಆದರೆ ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆಗಿದ್ದಾರೆ. ಅವರಿಬ್ಬರೂ ತಪ್ಪಿಸಿಕೊಂಡು ಹೋಗಿದ್ದಾರೆ ಎಂದು ಕೂಂಬಿಂಗ್ ನಡೆಸಲಾಯಿತು. ಕಳೆದ ಒಂದು ವಾರದಿಂದ ಕೂಂಬಿಂಗ್ ನಡೆಯುತ್ತಿತ್ತು. ಆಗ ಇದ್ದಕಿದ್ದಂತೆ ವಿಕ್ರಂ ಗೌಡ ಬರುವ ಮಾಹಿತಿ ಸಿಕ್ಕಿತ್ತು. ಆ ಸಂದರ್ಭದಲ್ಲಿ ಪೊಲೀಸರಿಗೆ ವಿಕ್ರಂ ಗೌಡನನ್ನು ಎನ್‌ಕೌಂಟರ್ ಮಾಡುವುದು ಅನಿವಾರ್ಯವಾಯಿತು ಎಂದು ತಿಳಿಸಿದರು.

ಪೊಲೀಸರ ಮೇಲೆ ವಿಕ್ರಂ ಗೌಡ ತಂಡ ದಾಳಿ ಮಾಡಿದೆ. ಹಾಗಾಗಿ ಪೊಲೀಸರು ಎನ್‌ಕೌಂಟರ್ ಮಾಡಬೇಕಾಯಿತು. ನಕ್ಸಲರನ್ನು ಮುಖ್ಯ ವೇದಿಕೆಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಹಿಂದೆ ಪಾವಗಡ ಭಾಗದಲ್ಲಿ ನಕ್ಸಲರನ್ನು ಮಾತನಾಡಿ ಮುಖ್ಯವೇದಿಕೆಗೆ ಕರೆತರಲಾಗಿತ್ತು. ಈಗಲೂ ಈ ಪ್ರಯತ್ನ ನಡೆಯುತ್ತಿದೆ. ಶರಣಾಗಲು ಬಯಸುವ ನಕ್ಸಲರಿಗೆ ಸಾಮಾನ್ಯ ಬದುಕು ನಡೆಸಲು ಸರ್ಕಾರ ಅವಕಾಶ ಮಾಡಿಕೊಡಲಿದೆ. ಅದು ಇದ್ದಿದ್ದೇ. ಆದರೆ ಅರಣ್ಯ ಭಾಗದಲ್ಲಿದ್ದು, ಪೊಲೀಸರ ಮೇಲೆ ತಪ್ಪಿಸಿಕೊಂಡು ಹೋಗಲು ಪ್ರಯತ್ನ ಮಾಡಿದರೇ ಈ ಥರ ಘಟನೆ ಆಗೋದು ಸಹಜ ಎಂದು ಹೇಳಿದರು

ಕಳೆದೊಂದು ವಾರದಿಂದ ನಕ್ಸಲ್ ಚಟುವಟಿಕೆಗಳ ಮೇಲೆ ಪೊಲೀಸರು ಮೇಲೆ ನಿಗಾವಹಿಸಿದ್ದರು‌. ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆಗಿದ್ದ ಹಿನ್ನೆಲೆಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು. ನಿನ್ನೆ ಕೂಂಬಿಂಗ್ ವೇಳೆ ಮಾಹಿತಿ ಆಧರಿಸಿ ಕಾರ್ಯಾಚರಣೆ ಮುಂದುವರಿಸಿದ್ದರು. ಕಾರ್ಯಾಚರಣೆ ವೇಳೆ ಪೊಲೀಸರು ಕಂಡ ತಕ್ಷಣ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಎನ್‌ಕೌಂಟರ್ ಮಾಡಬೇಕಾದ ಪರಿಸ್ಥಿತಿ ಬಂದಿತ್ತು. ಇನ್ನು ಇಬ್ಬರು ಮೂವರು ತಪ್ಪಿಸಿಕೊಂಡಿದ್ದಾರೆ ಎಂಬುದು ಈವರೆಗಿನ ಮಾಹಿತಿ. ಹೆಚ್ಚಿನ ಮಾಹಿತಿ ಲಭ್ಯವಾದ ನಂತರ ಹಂಚಿಕೊಳ್ಳುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇತ್ತೀಚೆಗೆ ಮಾವೋವಾದಿ ಸಂಘಟನೆಯಲ್ಲಿದ್ದ ಅನಿರುದ್ಧ ಎಂಬಾತನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ. ಅನಿರುದ್ಧ್ ಬಂಧನದಿಂದ ರಾಜ್ಯದಲ್ಲಿ ಮತ್ತೆ ನಕ್ಸಲ್‌ ಚಟುವಟಿಕೆ ಚುರುಕುಗೊಳಿಸುವ ಪ್ರಯತ್ನ ನಡೆಸಲಾಗುತ್ತಿದ್ಯಾ? ಎಂಬ ಕುತೂಹಲ ಕೆರಳಿಸಿತ್ತು. ಇದೀಗ ಅದರ ಬೆನ್ನಲ್ಲೇ ಉಡುಪಿ ಜಿಲ್ಲೆಯಲ್ಲಿ ಎಎನ್‌ಎಫ್ ನಡೆಸಿರುವ ಎನ್‌ಕೌಂಟರ್‌ಗೆ ವಿಕ್ರಂ ಗೌಡ ಬಲಿಯಾಗಿದ್ದಾನೆ.

ಇತ್ತೀಚೆಗೆ ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ಭಾಗದಲ್ಲಿ ಕೆಲವು ಗ್ರಾಮಗಳಿಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ವರದಿಯಾಗಿತ್ತು. ಅದೇ ರೀತಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೆಲವೆಡೆ ನಕ್ಸಲರು ಭೇಟಿ ನೀಡಿದ ಸುಳಿವು ದೊರೆತಿತ್ತು. ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬವರ ಮನೆಯಲ್ಲಿ 3 ಬಂದೂಕುಗಳು ಪತ್ತೆಯಾಗಿದ್ದವು. ಆ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿತ್ತು.

ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ವಿಕ್ರಮ್ ಗೌಡನ ಮೂಲ ಉಡುಪಿ ಹೆಬ್ರಿ ತಾಲೂಕಿನ ಕೂಡ್ಲು ನಾಡ್ವಾಲು ಗ್ರಾಮ. ದಕ್ಷಿಣ ಭಾರತದಲ್ಲಿ ನಕ್ಸಲ್ ಸಂಘಟನೆಯ ನಾಯಕತ್ವ ತಮಿಳುನಾಡು ಮೂಲದ ಕುಪ್ಪುಸ್ವಾಮಿ ವಹಿಸಿಕೊಂಡಿದ್ದರೆ, ರಾಜ್ಯದಲ್ಲಿನ ಜವಾಬ್ದಾರಿ ವಿಕ್ರಮ್ ಗೌಡ ಹೆಗಲಿಗೆ ಬಿದ್ದಿತ್ತು. 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿರುವ ವಿಕ್ರಮ್ ಗೌಡ ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದ. ಕಾರ್ಮಿಕ ಸಂಘಟನೆಯಿಂದ ಬಂದಿದ್ದ ವಿಕ್ರಮ್ ಗೌಡ 3 ಬಾರಿ ಕರ್ನಾಟಕ ಪೊಲೀಸರ ಕೈಯಿಂದ ಪರಾರಿಯಾಗಿದ್ದ. 2016ರಲ್ಲಿ ಕೇರಳ ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸಿದ್ದರು.

2001ರಲ್ಲಿ ರಾಜ್ಯದಲ್ಲಿ ನಕ್ಸಲ್ ನೇತೃತ್ವವನ್ನು ಸಾಕೇತ್ ರಾಜನ್ ನಿರ್ವಹಿಸುತ್ತಿದ್ದ. ಫೆಬ್ರವರಿ 6, 2005 ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸಮೀಪದ ಮೆಣಸಿನಹಾಡ್ಯ ಎಂಬ ಸ್ಥಳದಲ್ಲಿ ಪೊಲೀಸರು ಈತನನ್ನು ಎನ್ಕೌಂಟರ್ ಮಾಡಿದ್ದರು. ನಂತರ ನೆಲಗುಳಿ ಪದ್ಮನಾಭ ನೇತೃತ್ವ ವಹಿಸಿದ್ದ. ಬರ್ಕಾನ ಬಳಿ ಪೊಲೀಸ್ ಗುಂಡೇಟಿಗೆ ಈತ ತನ್ನ ಕಾಲುಗಳನ್ನು ಕಳೆದುಕೊಂಡಿದ್ದ. ನಂತರ 2006 ರಿಂದ 2011 ರವರೆಗೆ ಬಿ ಜಿ ಕೃಷ್ಣಮೂರ್ತಿ ರಾಜ್ಯದಲ್ಲಿ ನಕ್ಸಲೀಯರನ್ನು ಮುನ್ನಡೆಸುತ್ತಿದ್ದ. ಈ ನಡುವೆ ಈತನ ಪತ್ನಿಯ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಈತನ ಗಮನ ಪತ್ನಿಯತ್ತ ಹೊರಳಲು ಆರಂಭವಾಗಿತ್ತು. ನಂತರ 2011ರಲ್ಲಿ ವಿಕ್ರಮ್ ಗೌಡ ಇದರ ಜವಾಬ್ದಾರಿ ವಹಿಸಿಕೊಂಡಿರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ ಪ್ರಕರಣ ಸಂಬಂಧ ನಕ್ಸಲ್ ಮುಖಂಡಾರ ಮುಂಡಗಾರು ಲತಾ, ಜಯಣ್ಣ ಸೇರಿ ಮೂವರ ವಿರುದ್ಧ ಜಯಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. UAPA 1967 ಕಾಯ್ದೆ ಸೇರಿದಂತೆ, 329(4), 351(2), 61(2), 147, BNS 3&25, ಶಸ್ತ್ರಾಸ್ತ್ರ ಕಾಯ್ದೆ 110(B) 13, 16, 18, 20, 38ರ ಅಡಿ ಪ್ರಕರಣ ದಾಖಲಿಸಲಾಗಿದೆ.

ಪಕ್ಕದ ಕೇರಳ ರಾಜ್ಯದಿಂದ ಮತ್ತೆ ಕರ್ನಾಕಟಕ್ಕೆ ಶಿಫ್ಟ್ ಆದ್ರಾ ನಕ್ಸಲರು ಅನ್ನೋ ಅನುಮಾನ ಆತಂಕ ಮತ್ತೆ ಶುರುವಾಗಿದೆ.. ಒಂದು ಕಡೆ ಕಳೆದ 10 -12ದಿನಗಳಿಂದ ನಿರಂತ ನಕ್ಸಲರಿಗಾಗಿ ಶೋಧಕಾರ್ಯ ಮಾಡುತ್ತಿರುವ ಎಎನ್ಎ​ಫ್ ಹಾಗೂ ಪೊಲೀಸರು ಶೋಧಕಾರ್ಯ ಮಾಡುತ್ತಿದ್ದಾರೆ.

 

 

 

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments