ರಾಜ್ಯ ಬಿಜೆಪಿಯೊಳಗಿನ ಬಣ ಬಡುದಾಟ ಜೋರಾಗಿರುವ ಬೆನ್ನಲ್ಲೇ, ಹಿಂದುಳಿದ ಸಮುದಾಯದ ಪ್ರಭಾವಿ ನಾಯಕ ಮಾಜಿ ಸಚಿವ ಬಿ.ಶ್ರೀರಾಮುಲು ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಈ ದಿಢೀರ್ ಬೆಳವಣಿಗೆ ಬಿಜೆಪಿಗೆ ಭಾರೀ ಆಘಾತ ನೀಡಿದ್ದು, ಒಂದು ವೇಳೆ ರಾಮುಲು ಬಿಜೆಪಿ ಬಿಡುವ ನಿರ್ಧಾರಕ್ಕೆ ಬಂದರೆ ಪರಿಶಿಷ್ಟ ವರ್ಗದ ಮತಗಳು ಕೈ ತಪ್ಪುವ ಆತಂಕ ಕಮಲ ಪಕ್ಷಕ್ಕೆ ಎದುರಾಗಿದೆ.
ಕರ್ನಾಟಕದಲ್ಲಿ ಬಿಜೆಪಿ ಬಣ ರಾಜಕೀಯ ತೀವ್ರಗೊಂಡಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ರಾಮುಲು ವರ್ಸಸ್ ರೆಡ್ಡಿ ಸಮರ ಹೈಕಮಾಂಡ್ ಗಮನ ಸೆಳೆದಿದ್ದು, ಇದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಿದೆ.
ಏತನ್ಮಧ್ಯೆ, ರಾಮುಲು ಹಾಗೂ ರೆಡ್ಡಿ ಮುನಿಸು ಪಕ್ಷದ ಮೇಲೆ ಪರಿಣಾಮ ಬೀರದಂತೆ ರಾಜ್ಯ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿದೆ. ರಾಮುಲು ಅವರನ್ನು ಕರೆದು ಮಾತನಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ತಿಳಿಸಲಾಗಿದೆ. ಏನೇ ಗೊಂದಲ ಇದ್ದರೂ ಪಕ್ಷದ ಚೌಕಟ್ಟಿನಲ್ಲಿ ಬಗೆಹರಿಸುವಂತೆ ದೆಹಲಿ ನಾಯಕರು ಸಂದೇಶ ರವಾನಿಸಿದ್ದಾರೆ. ಈ ಮೂಲಕ ಬಳ್ಳಾರಿಯ ಬಿಜೆಪಿ ಬಣ ಬಡಿದಾಟಕ್ಕೆ ಮುಲಾಮು ಹಚ್ಚಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ.