ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ, ಚಿಂತಕ, ಕಥೆಗಾರ, ಕಾದಂಬರಿಕಾರ, ಪ್ರಬಂಧಕಾರ, ವೈಚಾರಿಕ ವಿಮರ್ಶಕ ಡಾ. ಮೊಗಳ್ಳಿ ಗಣೇಶ್ (64) ಅವರು ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಇಂದು ಮನೆಯಲ್ಲಿ ಸಾವನ್ನಪ್ಪಿದ್ಧಾರೆ..
ಡಾ. ಮೊಗಳ್ಳಿ ಗಣೇಶ್ ಅವರು 1963ರ ಜುಲೈ 1 ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂತೆಗೇನ ಹಳ್ಳಿಯಲ್ಲಿ ಜನಿಸಿದರು. ಮೈಸೂರು ಮಹಾರಾಜಾ ಕಾಲೇಜ್‌ನಲ್ಲಿ ಅರ್ಥಶಾಸ್ತ್ರದಲ್ಲಿ ಪದವೀ ಧರಿಸಿದ ಅವರು, ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಸಣ್ಣ ಕಥೆಗಾರರಾಗಿ ಗುರುತಿಸಿಕೊಂಡರು.
ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಸುಮಾರು 28 ವರ್ಷ ಪ್ರಾಧ್ಯಾಪಕರಾಗಿದ್ದ ಮೊಗಳ್ಳಿ ಗಣೇಶ್ ತಮ್ಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದವರು. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದ ಅವರು ‘ಸೂರ್ಯನನ್ನು ಬಚ್ಚಿಡಬಹುದೆ?’ ಮತ್ತು ‘ಅನಾದಿ’ ಕಾವ್ಯ ಸಂಕಲನಗಳ ಮೂಲಕ ಹೆಸರು ಮಾಡಿದರು.
ಪ್ರಬಲ ದಲಿತ ಚಿಂತಕರಾಗಿದ್ದ ಅವರು ದೇಶದ ಪ್ರತಿಷ್ಠತ ವಿಶ್ವವಿದ್ಯಾಲಯಗಳಿಗೆ ಆಹ್ವಾನಿತರಾಗಿ ಹೋಗುತ್ತಿದ್ದರು. ಹಂಪಿ ವಿಶ್ವವಿದ್ಯಾಲಯದಲ್ಲಿ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿದ್ದ ಇವರು ಸದ್ಯ ಹಾವೇರಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾಗಿದ್ದರು
ಮೊಗಳ್ಳಿ ಗಣೇಶ್ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ವರನಟ ಡಾ.ರಾಜಕುಮಾರ್ ಹೆಸರಿನಲ್ಲಿರುವ ಅಧ್ಯಯನ ಪೀಠಕ್ಕೆ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇನ್ನು ಕನ್ನಡದ ಖ್ಯಾತ ಕಥೆಗಾರ ,ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.


