ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಅವರ ಗೆಳತಿ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಅವರು ಮಂಗಳವಾರ ತಿಳಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ದಯಾನಂದ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಪೊಲೀಸರು ಚಾರ್ಜ್‌ಶೀಟ್‌ ಪ್ರತಿಗಳನ್ನು ಇಂಗ್ಲಿಷ್‌ಗೆ ಭಾಷಾಂತರ ಮಾಡುವ ಪ್ರಕ್ರಿಯೆ ನಡೆಸುತ್ತಿದ್ದರು. ಈ ಎಲ್ಲಾ ಪ್ರಕ್ರಿಯೆಗಳು ಈಗ ಮಗಿದಿದೆ.

ಡಿ.13 ರಂದು ಹೈಕೋರ್ಟ್‌ ದರ್ಶನ್‌ಗೆ ಜಾಮೀನು ಮಂಜೂರು ಮಾಡಿತ್ತು. ಇದಕ್ಕೂ ಮೊದಲು ದರ್ಶನ್‌ ವೈದ್ಯಕೀಯ ಕಾರಣ ನೀಡಿ 6 ವಾರಗಳ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು.

ಹೈಕೋರ್ಟ್ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಏಕ ಸದಸ್ಯಪೀಠ ಆರೋಪಿ ನಂಬರ್ 1 ದರ್ಶನ್ ಅವರ ಸ್ನೇಹಿತೆ ಪವಿತ್ರಾ ಗೌಡ, 2ನೇ ಆರೋಪಿಯಾಗಿರುವ ದರ್ಶನ್‌, ಇತರ ಆರೋಪಿಗಳಾದ ಆರ್ ನಾಗರಾಜು, ಅನು ಕುಮಾರ್ ಅಲಿಯಾಸ್ ಅನು, ಲಕ್ಷ್ಮಣ್ ಎಂ, ಜಗದೀಶ್ ಅಲಿಯಾಸ್ ಜಗ್ಗ ಮತ್ತು ಪ್ರದೂಷ್ ಎಸ್ ರಾವ್ ಅವರಿಗೆ ಕಳೆದ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

By Veeresh

Leave a Reply

Your email address will not be published. Required fields are marked *

Verified by MonsterInsights