ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸೆಷನ್ಸ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ.. ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಿದ್ದ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಆರೋಪಿಗಳಿಗೆ ದೋಷಾರೋಪ ವಿಚಾರಣೆ ನಿಗದಿ ಬಗ್ಗೆ ಕೋರ್ಟ್ ಮಾಹಿತಿ ನೀಡಿದ್ದು, ಚಾರ್ಜ್ ಫ್ರೇಮ್ಗೆ ಡೇಟ್ ಫಿಕ್ಸ್ ಮಾಡಿದ್ದು, ವಿಚಾರಣೆಯನ್ನ ನವೆಂಬರ್ 3ಕ್ಕೆ ಮುಂದೂಡಿಕೆ ಮಾಡಿದ್ದಾರೆ.
ಚಾರ್ಜ್ ಫ್ರೇಮ್ ಮಾಡಬೇಕಾದ್ರೆ ಆರೋಪಿಗಳು ಕಡ್ಡಾಯವಾಗಿ ಹಾಜರಿರಬೇಕು. ವಿಡಿಯೋ ಕಾನ್ಫರೆನ್ಸ್ ಮೂಲಕ ಚಾರ್ಜ್ ಫ್ರೇಮ್ ಮಾಡದಂತೆ ದರ್ಶನ್ ಪರ ವಕೀಲರು ಮನವಿ ಮಾಡಿದ್ರು. ಹೀಗಾಗಿ ನ್ಯಾಯಾಧೀಶರು ನವೆಂಬರ್ 3ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದ್ದಾರೆ.
ನವೆಂಬರ್ 3 ರಂದೇ ಚಾರ್ಜ್ ಫ್ರೇಮ್ ಪ್ರಕ್ರಿಯೆ ನಡೆಸಲು ಡೇಟ್ ಕೂಡ ಫಿಕ್ಸ್ ಮಾಡಲಾಗಿದೆ. ಅಂದೇ ಟ್ರಯಲ್ ಡೇಟ್ ಕೂಡ ನಿರ್ಧಾರವಾಗುವ ಸಾಧ್ಯತೆ ಇದೆ. ಇನ್ನು ಚಾರ್ಜ್‌ಫ್ರೇಮ್ ನಿಗದಿ ಮಾಡಿ ಸೋಮವಾರಕ್ಕೆ ವಿಚಾರಣೆ ಮುಂದೂಡಲಾಗಿದೆ. ಎಲ್ಲಾ ಆರೋಪಿಗಳು ಹಾಜರಾಗಬೇಕು. ಗೈರಾದ್ರೆ ಅವತ್ತೆ ಬಂಧನಕ್ಕೆ ಆದೇಶ ನೀಡುವುದಾಗಿ ಕೋರ್ಟ್ ಎಚ್ಚರಿಕೆ ನೀಡಿದೆ.


