Top Newsಕ್ರೈಂ ಸ್ಟೋರಿರಾಜ್ಯಸಿನಿಮಾಸುದ್ದಿ

ಇಂದು ದರ್ಶನ್‌ ಜಾಮೀನು ಭವಿಷ್ಯ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆರೋಪಿಗಳ ಜಾಮೀನು ಭವಿಷ್ಯ ಇಂದು ಪ್ರಕಟ ಆಗಲಿದೆ. ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಜನ ಆರೋಪಿಗಳ ಜಾಮೀನು ಭವಿಷ್ಯ ಇಂದು (ಡಿ.13) ತೀರ್ಮಾನ ಆಗಲಿದೆ.

ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಕಳೆದ ಕೆಲ ವಾರಗಳಿಂದ ನಡೆಯುತ್ತಿತ್ತು. ದರ್ಶನ್ ಪರವಾಗಿ ವಕೀಲ ಸಿವಿ ನಾಗೇಶ್ ವಾದ ಮಂಡಿಸಿ, ದರ್ಶನ್ ಅವರನ್ನು ಈ ಪ್ರಕರಣದಲ್ಲಿ ಸಿಕ್ಕಿಸಲಾಗಿದೆ ಎಂದು ಹೇಳಿದ್ದಾರೆ. ಅತ್ತ, ಸರ್ಕಾರಿ ಪರ ವಕೀಲ ಪ್ರಸನ್ನ ಕುಮಾರ್ ಅವರು ದರ್ಶನ್ ಅವರು ಈ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎಂಬುದಕ್ಕೆ ಸಾಕ್ಷಿಗಳು ಸಿಕ್ಕಿವೆ ಎಂಬುದನ್ನು ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದಾರೆ.

ಸದ್ಯ ಕೋರ್ಟ್ ಎರಡೂ ಕಡೆಯ ವಾದವನ್ನು ಆಲಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ. ಇಂದು ಮಧ್ಯಾಹ್ನ 2:30ರ ಸುಮಾರಿಗೆ ತೀರ್ಪನ್ನು ನೀಡಲಿದೆ. ಸದ್ಯ ದರ್ಶನ್ ಅವರು ಆಸ್ಪತ್ರೆಯಿಂದಲೇ ಟೆನ್ಷನ್​​ನಲ್ಲಿ ಇದಕ್ಕಾಗಿ ಕಾಯುತ್ತಿದ್ದಾರೆ. ಇದು ದರ್ಶನ್ ಅವರ ಸಿನಿ ಭವಿಷ್ಯವನ್ನೂ ನಿರ್ಧರಿಸಲಿದೆ.

7 ಆರೋಪಿಗಳ ಜಾಮೀನು ಅರ್ಜಿಗಳ ವಿಚಾರಣೆಯನ್ನು ನ್ಯಾಯಪೀಠ ಇದೇ ಡಿ.9ರಂದು ಪೂರ್ಣಗೊಳಿಸಿತ್ತು. ಬಳಿಕ ಮುಂದಿನ ಆದೇಶದ ವರೆಗೆ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿತ್ತು.

ಒಂದೊಮ್ಮೆ ದರ್ಶನ್‌ ಜಾಮೀನು ಅರ್ಜಿ ವಜಾಗೊಂಡರೆ, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿ, ಗುಣಮುಖರಾದ ಬಳಿಕ ಮತ್ತೆ ಜೈಲಿಗೆ ತೆರಳಬೇಕಾಗುತ್ತದೆ. ಬೇಲ್‌ ಸಿಕ್ಕರೆ ಗುಣಮುಖರಾದ ನಂತರ ಮನೆಗೆ ತೆರಳಲಿದ್ದಾರೆ.

ದರ್ಶನ್ ಅಲ್ಲದೇ ಎ1 ಆರೋಪಿ ಪವಿತ್ರಾಗೌಡ, ಉಳಿದ ಆರೋಪಿಗಳಾದ ಲಕ್ಷ್ಮಣ್, ನಾಗರಾಜ್, ಅನುಕುಮಾರ್, ಜಗದೀಶ್, ಪ್ರದೂಷ್ ಜಾಮೀನು ತೀರ್ಪನ್ನು ಕೋರ್ಟ್ ಪ್ರಕಟಿಸಲಿದೆ. ಯಾರಿಗೆ ಜಾಮೀನು ಸಿಗುತ್ತದೆ, ಯಾರು ಮತ್ತೆ ಜೈಲುವಾಸ ಮುಂದುವರಿಸಬೇಕಾಗುತ್ತದೆ ಎನ್ನುವ ಪ್ರಶ್ನೆ ಮೂಡಿದೆ.

Comments (0)

Your email address will not be published. Required fields are marked *

Back to top button