Top Newsರಾಜ್ಯಸಿನಿಮಾಸುದ್ದಿ

ದರ್ಶನ್‌ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್‌ : ಜಾಮೀನು ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿಕೆ

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಸುಪ್ರೀಂಕೋರ್ಟ್​ನಲ್ಲಿ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದರು. ಈ ವೇಳೆ ಸುಪ್ರೀಂಕೋರ್ಟ್ ಏಳು ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿದೆ.

ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ರು.

ಇಂದು ಸುಪ್ರೀಂ ಕೋರ್ಟ್ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಸುಪ್ರೀಂ ಕೋರ್ಟ್ ನ್ಯಾ. ಜೆ ಬಿ ಪರ್ಧಿವಾಲಾ ಹಾಗೂ ಆರ್ ಮಹದೇವನ್ ಅವರ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯಿತು. ರಾಜ್ಯ ಸರ್ಕಾರದ ಪರವಾಗಿ ವಕೀಲ ಲೂತ್ರಾ ವಾದ ಮಂಡಿಸಿದ್ದಾರೆ.  ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ 7 ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಸರ್ಕಾರಿ ಪರ ವಕೀಲರು ತಮ್ಮ ವಾದ ಮಂಡಿಸಿದ್ರು. ಈ ಕೇಸ್ ನಲ್ಲಿ ಆರೋಪಿಗಳು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ, ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಬೇಕು ಎಂದು ನ್ಯಾಯಾಧೀಶರ ಬಳಿ ಮನವಿ ಮಾಡಿಕೊಂಡ್ರು.

Comments (0)

Your email address will not be published. Required fields are marked *

Back to top button