ಚಿತ್ರದುರ್ಗ: ಮಗನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿಂದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ ಸಂತಸ ವ್ಯಕ್ತಪಡಿಸಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಅವರು ತೀರ್ಪು ಏನಾಗುತ್ತೋ ಎಂಬ ಭಯ ಇತ್ತು. ಸುಪ್ರೀಂಕೋರ್ಟ್ನಲ್ಲಿ ಜಾಮೀನು ರದ್ದಾಗಿರುವುದಕ್ಕೆ ನ್ಯಾಯಾಂಗದ ಮೇಲೆ ನಂಬಿಕೆ ಬಂದಿದೆ. ಹೈಕೋರ್ಟ್ ಜಾಮೀನು ನೀಡಿದಾಗ ಆತಂಕವಾಗಿತ್ತು. ಸರ್ಕಾರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಸುಪ್ರೀಂಕೋರ್ಟ್ನಲ್ಲಿ ಅಪರಾಧಿ ತಪ್ಪಿಸಿಕೊಳ್ಳಲು ಅಸಾಧ್ಯ ಎಂದು ಈ ತೀರ್ಪು ಬಂದಿದೆ. ಇದರಿಂದ ಸರ್ಕಾರ & ನ್ಯಾಯಾಂಗದ ಬಗ್ಗೆ ಹೆಚ್ಚು ನಂಬಿಕೆ ಹುಟ್ಟಿದೆ. ಈ ಕೇಸ್ನಲ್ಲಿ ನ್ಯಾಯ ಸಿಗುತ್ತೆ ಎಂಬ ನಂಬಿಕೆ ಇದೆ. ಸೊಸೆಯ ಕೆಲಸದ ಬಗ್ಗೆ ನೋವಿದೆ. ಕೆಲಸ ಕೊಡುವ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ರು.
ಸುಪ್ರೀಂಕೋರ್ಟ್ನಲ್ಲಿ ನ್ಯಾಯ ಸಾಭೀತಾಗಿದೆ. ನ್ಯಾಯಾಂಗ, ಸರ್ಕಾರದ ಬಗ್ಗೆ ವಿಶ್ವಾಸ ಮೂಡಿದೆ. ಸರ್ಕಾರ, ನ್ಯಾಯಾಂಗವನ್ನು ಅಭಿನಂದಿಸುತ್ತೇವೆ ಎಂದು ತಿಳಿಸಿದ್ರು. ಮೊಮ್ಮಗ, ಸೊಸೆಗೆ ಆಧಾರವಾಗಲೆಂದು ಪೂಜೆ ಸಲ್ಲಿಕೆ ಮಾಡಿದ್ದೆವು. ತೀರ್ಪು ವಿಳಂಬವಾಗಬಹುದು ಅಂತ ಪೂಜೆ ಸಲ್ಲಿಸ್ತಿದೆ. ಬೇಗ ತೀರ್ಪು ಹೊರಬಂದಿದೆ. ಗುರುಗಳು, ದೇವರ ಅನುಗ್ರಹದಿಂದ ಒಳ್ಳೆಯದು ಆಗಿದೆ ಎಂದಿದ್ದಾರೆ.
ಇನ್ನು ರೇಣುಕಾಸ್ವಾಮಿ ಪತ್ನಿ ಸಹನಾ ಪ್ರತಿಕ್ರಿಯೆ ನೀಡಿದ್ದು, ಯಾರೂ ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಿದೆ.ಕಾನೂನಿನಲ್ಲಿ ಎಲ್ಲರೂ ಸಮಾನರು ಎಂದು ಗೊತ್ತಾಗಿದೆ.ಯಾರೇ ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗಲಿ.ಕಾನೂನಿನಲ್ಲಿ ಯಾವ ರೀತಿಯಲ್ಲಿ ಶಿಕ್ಷೆ ಆಗಬೇಕು ಶಿಕ್ಷೆ ಕೊಡಲಿ ಎಂದು ಹೇಳಿದ್ದಾರೆ.