Wednesday, January 28, 2026
23.8 C
Bengaluru
Google search engine
LIVE
ಮನೆ#Exclusive Newsಜ್ಞಾನವಾಪಿ ಮಸೀದಿ ಸಂಪೂರ್ಣ ಸಮೀಕ್ಷೆಗೆ ಮನವಿ – ಹಿಂದೂ ಅರ್ಜಿ ವಜಾಗೊಳಿಸಿದ ಕೋರ್ಟ್‌

ಜ್ಞಾನವಾಪಿ ಮಸೀದಿ ಸಂಪೂರ್ಣ ಸಮೀಕ್ಷೆಗೆ ಮನವಿ – ಹಿಂದೂ ಅರ್ಜಿ ವಜಾಗೊಳಿಸಿದ ಕೋರ್ಟ್‌

ಲಕ್ನೋ: ಜ್ಞಾನವಾಪಿ ಸಂಕೀರ್ಣದಲ್ಲಿ (Gyanvapi Mosque) ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಹೆಚ್ಚುವರಿ ಸಮೀಕ್ಷೆಗೆ ಹಿಂದೂ ಪರವಾಗಿ ಸಲ್ಲಿಸಿದ್ದ ಮನವಿಯನ್ನು ವಾರಣಾಸಿ ನ್ಯಾಯಾಲಯ (Varanasi Court) ಶುಕ್ರವಾರ ವಜಾಗೊಳಿಸಿದೆ.


ವಾರಣಾಸಿಯ ಸಿವಿಲ್ ನ್ಯಾಯಾಲಯದ ನ್ಯಾ.ಯುಗುಲ್ ಶಂಭು ಅವರ ನೇತೃತ್ವದ ಪೀಠವು ಅರ್ಜಿಯನ್ನು ವಜಾ ಮಾಡಿದೆ. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ ವಕೀಲ ವಿಜಯ್ ಶಂಕರ್ ರಸ್ತೋಗಿ ಅವರು, ಆದೇಶವನ್ನು ಪರಿಶೀಲಿಸಿ ನಂತರ ಅಲಹಾಬಾದ್ ಹೈಕೋರ್ಟ್ ಅಥವಾ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಫೆಬ್ರವರಿಯಲ್ಲಿ, ರಸ್ತೋಗಿ ಅವರು ವಾರಣಾಸಿಯ ಸಿವಿಲ್ ನ್ಯಾಯಾಧೀಶರ (ಹಿರಿಯ ವಿಭಾಗ) ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇಡೀ ಜ್ಞಾನವಾಪಿ ಸಂಕೀರ್ಣದ ಸಮಗ್ರ ಸಮೀಕ್ಷೆಯನ್ನು ನಡೆಸಲು ಎಎಸ್‌ಐಗೆ ಆದೇಶ ನೀಡುವಂತೆ ಕೋರಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments