Tuesday, March 3, 2026
20.2 C
Bengaluru
Google search engine
LIVE
ಮನೆ#Exclusive NewsTop Newsಕೊಲ್ಲಿಯಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆ;ಆತಂಕಬೇಡ ಎಂದ ಕೃಷ್ಣ ಬೈರೇಗೌಡ!

ಕೊಲ್ಲಿಯಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆ;ಆತಂಕಬೇಡ ಎಂದ ಕೃಷ್ಣ ಬೈರೇಗೌಡ!

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಇರಾನ್ ಯುದ್ಧದ ಭೀತಿ ಹಿನ್ನೆಲೆಯಲ್ಲಿ ಅಲ್ಲಿನ ವಿವಿಧ ದೇಶಗಳಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆ ಕುರಿತು ರಾಜ್ಯದ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಲ್ಲಿ ರಾಷ್ಟ್ರಗಳಲ್ಲಿ ಸಂಘರ್ಷದ ಪರಿಸ್ಥಿತಿಯಿಂದಾಗಿ ಕನ್ನಡಿಗರು ಆತಂಕದಲ್ಲಿದ್ದಾರೆ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ, ರಾಜ್ಯ ಸರ್ಕಾರವು ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ರಾಜ್ಯ ವಿಪತ್ತು ನಿರ್ವಹಣಾ ವಿಭಾಗವು ಈಗಾಗಲೇ ಕಾರ್ಯಪ್ರವೃತ್ತವಾಗಿದೆ. ಶನಿವಾರ ರಾತ್ರಿಯಿಂದಲೇ ವಿಶೇಷ ಸಹಾಯವಾಣಿಯನ್ನು ಆರಂಭಿಸಲಾಗಿದ್ದು, ಇದುವರೆಗೆ ಸುಮಾರು 109 ಕನ್ನಡಿಗರು ತಮ್ಮ ಮಾಹಿತಿ ನೀಡಿ ರಕ್ಷಣೆಗಾಗಿ ಮನವಿ ಮಾಡಿದ್ದಾರೆ. ದೆಹಲಿಯಲ್ಲಿರುವ ಕರ್ನಾಟಕದ ರೆಸಿಡೆಂಟ್ ಕಮಿಷನರ್ ಅವರು ಕೇಂದ್ರ ವಿದೇಶಾಂಗ ಇಲಾಖೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕನ್ನಡಿಗರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಸಚಿವರು ವಿವರಿಸಿದ್ದಾರೆ.

ಸದ್ಯ ದುಬೈ ಮತ್ತು ಬಹ್ರೇನ್ ವಿಮಾನ ನಿಲ್ದಾಣಗಳಲ್ಲಿ ಹಲವು ಕನ್ನಡಿಗರು ಸಿಲುಕಿಕೊಂಡಿರುವ ಮಾಹಿತಿ ಲಭ್ಯವಾಗಿದೆ. ಆದರೆ, ಯುದ್ಧದ ಹಿನ್ನೆಲೆಯಲ್ಲಿ ಆಕಾಶ ಮಾರ್ಗದ ಸಂಚಾರದ ಮೇಲೆ ಹೇರಲಾಗಿರುವ ನಿಷೇಧದಿಂದಾಗಿ ತಕ್ಷಣವೇ ವಿಶೇಷ ವಿಮಾನಗಳ ಹಾರಾಟ ನಡೆಸಲು ತಾಂತ್ರಿಕ ತೊಂದರೆ ಎದುರಾಗಿದೆ. ಪರಿಸ್ಥಿತಿ ತಿಳಿಯಾಗುತ್ತಿದ್ದಂತೆಯೇ ಎಲ್ಲರನ್ನೂ ಏರ್‌ಲಿಫ್ಟ್ ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜೊತೆಗೂಡಿ ರಾಜ್ಯ ಸರ್ಕಾರವು ಪ್ರತಿ ಕ್ಷಣದ ಬೆಳವಣಿಗೆಯನ್ನು ಗಮನಿಸುತ್ತಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರ ನೆರವಿಗೆ ಸನ್ನದ್ಧವಾಗಿದೆ ಎಂದಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments