Wednesday, April 30, 2025
24.6 C
Bengaluru
LIVE
ಮನೆ#Exclusive NewsTop Newsನದಿಯಲ್ಲಿ ಕೊಚ್ಚಿ ಹೋಯ್ದು ಕಾರು- ಮರ ಏರಿದ್ದ ಚಾಲಕನ ರಕ್ಷಣೆ

ನದಿಯಲ್ಲಿ ಕೊಚ್ಚಿ ಹೋಯ್ದು ಕಾರು- ಮರ ಏರಿದ್ದ ಚಾಲಕನ ರಕ್ಷಣೆ

ಧಾರವಾಡ: ತುಂಬಿ ಹರಿಯುತ್ತಿದ್ದ ಶಾಲ್ಮಲಾ ನದಿಗೆ ಕಾರು ಸಮೇತ ಸಿಲುಕಿದ್ದ ಚಾಲಕನನ್ನು ರಕ್ಷಿಸುವಲ್ಲಿ ಅಗ್ನಿ ಶಾಮಕದಳದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಯಶಸ್ವಿಯಾಗಿದ್ದಾರೆ. ಈ ಘಟನೆಯು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ-ಬೇಗೂರು ನಡುವೆ ಮಂಗಳವಾರ ತಡರಾತ್ರಿ ಘಟನೆ ನಡೆದಿದೆ.

ಧಾರವಾಡ ತಾಲೂಕಿನ ಪುಡಕಲಕಟ್ಟಿ ಗ್ರಾಮದ ನಾಗರಾಜ ದೇಮಣ್ಣವರ ಬೇಗೂರು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ನೀರಿನ ರಭಸಕ್ಕೆ ಕಾರು ಸಮೇತ ಕೊಚ್ಚಿ ಹೋಗಿತ್ತು. ಚಾಲಕ ಅಪಾಯಕ್ಕೆ ಸಿಲುಕಿದ್ದು, ಕೊಚ್ಚಿ ಹೋಗುವ ಸಮಯದಲ್ಲಿ ಕಾರಿನಿಂದ ಆತ ಮರವೇರಿದ್ದಾನೆ.ಇದನ್ನ ಗಮನಿಸಿದ ಸ್ಥಳೀಯರು ಅಗ್ನಿ ಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಯುವಕನ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments