ಹಾಸನ: ಹಾಸನಾಂಬೆ ದರ್ಶನಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ದಂಪತಿ ದೇವಾಲಯಕ್ಕೆ ಭೇಟಿ ನೀಡುವ ವೇಳೆ ರೇವಣ್ಣ ಅವರ ಕಾರನ್ನು ತಡೆದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ರೇವಣ್ಣ ಗರಂ ಆಗಿದ್ಧಾರೆ..
ಮಾಜಿ ಪ್ರಧಾನಿ ಕುಟುಂಬದ ಹಿನ್ನೆಲೆಯಲ್ಲಿ ವಿಶೇಷ ಭದ್ರತೆ ಹೊಂದಿರುವ ರೇವಣ್ಣ ಅವರು ತಮ್ಮದೇ ಕಾರಿನಲ್ಲಿ ತಮ್ಮದೇ ಭದ್ರತಾ ವ್ಯವಸ್ಥೆಯೊಂದಿಗೆ ದೇವಿ ದರ್ಶನಕ್ಕೆ ಆಗಮಿಸಿದ್ದರು. ಈ ವೇಳೆ ಅವರ ಕಾರನ್ನ ತಡೆದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ರೇವಣ್ಣ ಗರಂ ಆಗಿದ್ದಾರೆ.
ಪತ್ನಿ ಭವಾನಿ ರೇವಣ್ಣ ಜೊತೆ ಸಾವಿರ ರೂ. ಟಿಕೆಟ್ ಪಡೆದು ನೇರ ದರ್ಶನಕ್ಕೆ ರೇವಣ್ಣ ಆಗಮಿಸಿದ್ದರು. ಬಳಿಕ ಅರ್ಧ ಗಂಟೆಗೂ ಹೆಚ್ಚು ಕಾಲ ವಿಶೇಷ ಪೂಜೆ ಸಲ್ಲಿಸಿದರು. ಹೆಚ್.ಡಿ.ದೇವೇಗೌಡರು, ಚೆನ್ನಮ್ಮ, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸೂರಜ್ ರೇವಣ್ಣ, ಪ್ರಜ್ವಲ್ ರೇವಣ್ಣ ಸೇರಿ ಕುಟುಂಬ ಸದಸ್ಯರ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.


