ಯಾದಗಿರಿ : ಫ್ರೀಡಂ ಟಿವಿಯ ಇಂಪ್ಯಾಕ್ಟ್ ಅಕ್ರಮ ಮರಳು ದಂಧೆ ಕೇಸ್‌ನಲ್ಲಿ ಕಂದಾಯ ನಿರೀಕ್ಷಕ ಮತ್ತು ಗ್ರಾಮಾಡಳಿತ ಅಧಿಕಾರಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ..
ದೋರನಹಳ್ಳಿಯ ಕಂದಾಯ ನಿರೀಕ್ಷಕ ಮಹೇಂದ್ರ ಮತ್ತು ಗ್ರಾಮ ಲೆಕ್ಕಾಧಿಕಾರಿ ದೇವೇಂದ್ರ ಅವರನ್ನು ಸಸ್ಪೆಂಡ್ ಮಾಡಿ ಶಹಾಪುರ ತಹಶೀಲ್ದಾರ್ ಸಿದ್ಧರೂಢ ಫ್ರೀಡಂ ಟಿವಿಗೆ ಮಾಹಿತಿ ನೀಡಿದ್ದಾರೆ. ಅಕ್ರಮ ಮರಳು ದಂಧೆ ಬಗ್ಗೆ ಫ್ರೀಡಂ ಟಿವಿ ವರದಿ ಬಿತ್ತರಿಸಿದ್ದು, ವರದಿ ಪ್ರಸಾರವಾದ ಬೆನ್ನಲ್ಲೇ ಅಧಿಕಾರಿಗಳು ಸಸ್ಪೆಂಡ್ ಮಾಡಲಾಗಿದೆ.. ಇನ್ನು ಅಕ್ರಮ ಗಣಿಗಾರಿಕೆಯಲ್ಲಿ ಇಬ್ಬರು ಅಧಿಕಾರಿಗಳು ಶಾಮೀಲಾಗಿರುವ ಆಡಿಯೋವೊಂದು ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ.