ರಾಜಕೀಯರಾಜ್ಯಸುದ್ದಿ

ರಸ್ತೆ ಅಪಘಾತ; ಡೆಪ್ಯೂಟಿ ಸ್ಪೀಕರ್​ ರುದ್ರಪ್ಪ ಲಮಾಣಿ ಅಪೋಲೋ ಆಸ್ಪತ್ರೆಗೆ ಶಿಫ್ಟ್

ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್​ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ​​ ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗ ಮಧ್ಯ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆ.ಜೆ.ಹಳ್ಳಿ ಗ್ರಾಮದ ಬಳಿ ರಸ್ತೆ ಅಪಘಾತ ಸಂಭವಿಸಿತ್ತು. ಕೂಡಲೇ ಅವರನ್ನು ದಾವಣಗೆರೆಯ S.S.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ, ಇದೀಗ ಏಕಾಏಕಿ ರುದ್ರಪ್ಪ ಲಮಾಣಿ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ರುದ್ರಪ್ಪ ಲಮಾಣಿ ಅವರು ನಿನ್ನೆ ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಸ್ವಕ್ಷೇತ್ರ ಹಾವೇರಿಗೆ ತೆರಳುತ್ತಿದ್ದರು. ರಸ್ತೆ ಮಧ್ಯೆ ಎಳನೀರು ಕುಡಿಯಲು ಚಿತ್ರದುರ್ಗದ ಜೆಜೆ ಹಳ್ಳಿ ಬಳಿ ಕಾರನ್ನುಸೈಡಿಗೆ ಹಾಕಿದ್ದಾರೆ. ಇದೇ ವೇಳೆ ಬೈಕ್​ವೊಂದು ರುದ್ರಪ್ಪ ಲಮಾಣಿ ಅವರಿಗೆ ಗುದ್ದಿದೆ. ಪರಿಣಾಮ ರುದ್ರಪ್ಪ ಲಮಾಣಿ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದರು, ಕೂಡಲೇ ಅವರನ್ನು ಹಿರಿಯೂರಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ದಾವಣಗೆರೆಯ ಎಸ್​ಎಸ್​ಆಸ್ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿತ್ತು.

Comments (0)

Your email address will not be published. Required fields are marked *

Back to top button