Tuesday, June 24, 2025
25.9 C
Bengaluru
Google search engine
LIVE
ಮನೆಕ್ರೈಂ ಸ್ಟೋರಿರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ದುರಂತ ಅಂತ್ಯ

ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ದುರಂತ ಅಂತ್ಯ

ಕಾರವಾರ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಅರಬೈಲ್​ ಘಟ್ಟದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್​ ಘಟ್ಟದಲ್ಲಿ ಈ ಭೀಕರ ಅಪಘಾತ ನಡೆದಿದೆ.

ಕೊಪ್ಪಳದಿಂದ ಪ್ರವಾಸಕ್ಕೆಂದು ಅಂಕೋಲಾ ಕಡೆಗೆ ಕುಟುಂಬ ಹೊರಟಿತ್ತು. ಓವರ್​ಟೇಕ್ ಮಾಡುವ ಭರದಲ್ಲಿ ಯಮವೇಗದಲ್ಲಿ ಬಂದ ಲಾರಿ ಕಾರಿಗೆ ಗುದ್ದಿದೆ. ಲಾರಿ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿ ಹೋಗಿದೆ. ಕಾರು ಚಲಾಯಿಸುತ್ತಿದ್ದ ವೆಂಕಟೇಶ್​, ಕಾರಿನಲ್ಲಿದ್ದ ಶ್ರೀಕಾಂತ್​ ರೆಡ್ಡಿ ಅವರ ಪತ್ನಿ ಚೈತ್ರಾ ನಾಲ್ಕು ವರ್ಷದ ಮಗು ಶ್ರೀಹಾನ್ ಸಾವನ್ನಪ್ಪಿದ್ದಾರೆ. ಯಲ್ಲಾಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೋಲಿಸ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments