ಬೆಂಗಳೂರು: ಕಾರ್ಮಿಕರಿಂದ ಕಡಿತಗೊಳಿಸಿದ್ದ ಭವಿಷ್ಯ ನಿಧಿ (ಪಿಎಫ್) ಹಣವನ್ನು ಸರ್ಕಾರಕ್ಕೆ ಜಮೆ ಮಾಡದೆ ವಂಚನೆ ಮಾಡಿದ್ದಾರೆಂಬ ಆರೋಪವನ್ನು ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವರು ನಿರಾಕರಿಸಿದ್ದಾರೆ.

ಹಣಕಾಸಿನ ನೆರವಿನ ಕಾರಣಕ್ಕೆ ಸ್ಟಾಬೆರ್ರಿ ಲೆನ್ಸೆರಿಯಾ ಪ್ರೈವೇಟ್ ಲಿ., ಸೆಂಟಾರಸ್ ಲೈಫ ಸ್ಟೈಲ್ ಬ್ರ್ಲಾಂಡ್ಸ್ ಪ್ರೈವೇಟ್ ಲಿ., ಬೆರ್ರಿಜ್ ಫ್ಯಾಶನ್ ಹೌಸ್ ಕಂಪನಿಗಳಿಗೆ ನಾನು 2018-19ರಲ್ಲಿ ನಿರ್ದೇಶನಕಾಗಿ ನೇಮಕಗೊಂಡಿದ್ದೆ. ಆದರೆ, ಕಾರ್ಯನಿರ್ವಾಹಕನಾಗಿ ಇರಲಿಲ್ಲ ಮತ್ತು ಕಂಪನಿಯ ದೈನಂದಿನ ವ್ಯವಹಾರದಲ್ಲಿ ನನಗೆ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ಈ ಕಂಪನಿಗಳು ನಾನು ಸಾಲದ ರೂಪದಲ್ಲಿ ನೀಡಿದ್ದ ಹಣವನ್ನು ಮರುಪಾವತಿಸಲು ವಿಫಲವಾಗಿವೆ. ಈಗ ಅದು ನ್ಯಾಯಾಲಯದಲ್ಲಿದೆ. ಅಲ್ಲದೆ. ಕಂಪನಿಯ ನಿರ್ದೇಶಕ ಹುದ್ದೆಗೆ ಕೆಲ ವರ್ಷಗಳ ಹಿಂದೆಯೇ ನಾನು ರಾಜೀನಾಮೆ ನೀಡಿದ್ದೇನೆಂದು ಹೇಳಿದ್ದಾರೆ.

ಕಂಪನಿಗೆ ಸಂಬಂಧಿಸಿದಂತೆ ನೋಟಿಸ್ ನೀಡಿದ್ದಕಕೆ ನನ್ನ ಕಾನೂನು ತಂಡ ಈಗಾಗಲೇ ಉತ್ತರ ನೀಡಿದೆ. ಕಂಪನಿ ಜೊತೆ ನನಗೆ ಸಂಬಂಧವಿಲ್ಲ ಎಂಬುದನ್ನು ಅಧಿಕಾರಿಗಳಿಗೆ ತಿಳಿಸಲಾಗಿದೆ. ನನ್ನ ವಿಚಾರದಲ್ಲಿ ಸರಿಯಾದ ಮಾಹಿತಿ ಇಲ್ಲದೆ ಸುದ್ದಿ ಹರಡದಿರಿ ಎಂದು ಮನವಿ ಮಾಡಿದ್ದಾರೆ.

ರಾಬಿನ್ ಉತ್ತಪ್ಪ ಒಡೆತನದ ಸೆಂಟಾರಸ್ ಲೈಫ್ ಸ್ಟೈಲ್ ಬ್ರ್ಯಾಂಡ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯು ಸಂಬಳದಲ್ಲಿ ಪಿಎಫ್ ಹಣ ಕಟ್ ಮಾಡಿದ್ದರೂ, ಉದ್ಯೋಗಿಗಳ ಖಾತೆಗೆ ಹಾಕದೇ 23 ಲಕ್ಷ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪಿಎಫ್ಓ ರಿಜಿನಲ್ ಕಮಿಷನರ್ ಷಡಾಕ್ಷಿರಿ ಗೋಪಾಲ ರೆಡ್ಡಿ ಅವರು, ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಇದೇ ತಿಂಗಳು ನಾಲ್ಕರಂದು ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ.

Leave a Reply

Your email address will not be published. Required fields are marked *

Verified by MonsterInsights