ಟೆಸ್ಟ್ ಕ್ರಿಕೆಟ್ನಲ್ಲಿ ಕೇವಲ ಮೂವರು ಬ್ಯಾಟರ್ಗಳು ಮಾತ್ರ 100 ಸಿಕ್ಸ್ ಸಿಡಿಸಿದ್ದಾರೆ. ಈ ಪಟ್ಟಿಯಲ್ಲಿ ಬೆನ್ ಸ್ಟೋಕ್ಸ್ ಅಗ್ರಸ್ಥಾನದಲ್ಲಿದ್ದರೆ, ಬ್ರೆಂಡನ್ ಮೆಕಲಂ (107 ಸಿಕ್ಸ್) ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು ಆ್ಯಡಂ ಗಿಲ್ಕ್ರಿಸ್ಟ್ (100) ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿಕ್ಸರ್ ಸರದಾರರ ಪಟ್ಟಿಗೆ ಸೇರ್ಪಡೆಯಾಗಲು ರೋಹಿತ್ ಶರ್ಮಾಗೆ ಉತ್ತಮ ಅವಕಾಶವಿದೆ.
ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 8 ಸಿಕ್ಸ್ ಸಿಡಿಸಿದರೆ ಹೊಸ ದಾಖಲೆ ನಿರ್ಮಾಣವಾಗಲಿದೆ. ಅದು ಸಹ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಅವರ ಸಿಕ್ಸರ್ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
ಅಂದರೆ ಟೆಸ್ಟ್ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿದೆ. 180 ಇನಿಂಗ್ಸ್ಗಳಲ್ಲಿ ಸೆಹ್ವಾಗ್ ಒಟ್ಟು 91 ಸಿಕ್ಸ್ಗಳನ್ನು ಸಿಡಿಸಿ ಭಾರತದ ಪರ ಟೆಸ್ಟ್ನಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ…