ಯಾದಗಿರಿ : ಯಲ್ಲಮನಗುಡ್ಡ, ಅಂಜನಾದ್ರಿ, ಮೈಲಾರಲಿಂಗೇಶ್ವರ ಬೆಟ್ಟ ಸೇರಿ ರಾಜ್ಯದ 10 ಕಡೆ ಬರಲಿದೆ ರೋಪ್ ವೇ ಯೋಜನೆ. ಈ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿಒಪ್ಪಿಗೆ ನೀಡಿದೆ.2024-25ನೇ ಸಾಲಿನ ಆಯವ್ಯಯದಲ್ಲಿ ರಾಜ್ಯದ ಪ್ರಮುಖ 10 ಪ್ರವಾಸಿ ತಾಣಗಳಲ್ಲಿಸಾರ್ವಜನಿಕ ಸಹಭಾಗಿತ್ವದಲ್ಲಿ ಕೇಬಲ್ ಕಾರ್/ ರೋಪ್ ವೇ ಸೌಲಭ್ಯ ಅಭಿವೃದ್ಧಿ ಪಡಿಸುವ ಘೋಷಣೆ ಮಾಡಲಾಗಿತ್ತು.
ಯಾದಗಿರಿಯ ಮೈಲಾಪುರದ ಮೈಲಾರಲಿಂಗೇಶ್ವರ ದೇವಸ್ಥಾನದ ಜತೆಗೆ ತುಮಕೂರು ಜಿಲ್ಲೆಯ ಮಧುಗಿರಿ ಏಕಶಿಲಾ ಬೆಟ್ಟ, ಸವದತ್ತಿ ಯಲ್ಲಮ್ಮನ ಗುಡ್ಡ, ಹಾವೇರಿ ಜಿಲ್ಲೆಯ ದೇವರಗುಡ್ಡ, ಗದಗ ಜಿಲ್ಲೆಯ ಹೊಳಲಮ್ಮನ ದೇವಸ್ಥಾನ, ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ, ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ನೃಪತುಂಗ ಬೆಟ್ಟ, ಗದಗ ಜಿಲ್ಲೆಯ ಗಜೇಂದ್ರಗಡದ ಕಾಲಕಾಲೇಶ್ವರ ದೇವಸ್ಥಾನ, ಯಾದಗಿರಿ ಕೋಟೆ, ಬಳ್ಳಾರಿ ಕೋಟೆ, ಕೊಡಗು ಜಿಲ್ಲೆಯ ಶಾಂತಹಳ್ಳಿ ಹೋಬಳಿ ಬೆಟ್ಟದಹಳ್ಳಿ ಗ್ರಾಮ ಪಂಚಾಯಿತಿಯ ಮಲ್ಲಳ್ಳಿ ಫಾಲ್ಸ್‌ನಲ್ಲಿಯೂ ಸರಕಾರದಿಂದ ರೋಪ್ ವೇ ಅಥವಾ ಕೇಬಲ್ ಕಾರ್ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ.