ಕ್ರಿಕೆಟ್ಸುದ್ದಿ

RCB vs CSK: ಫಾಫ್‌ ಫಿಫ್ಟಿ, ಚೆನ್ನೈಗೆ 219 ರನ್‌ ಗುರಿ!

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್ ತಂಡಗಳು 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ 68ನೇ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾದ ಆರ್‌ಸಿಬಿ ತನ್ನ ಪಾಲಿನ 20 ಓವರ್‌ಗಳಿಗೆ 5 ವಿಕೆಟ್‌ ನಷ್ಟಕ್ಕೆ 218 ರನ್‌ ಗಳಿಸಿದೆ. ಆ ಮೂಲಕ ಸಿಎಸ್‌ಕೆಗೆ 219 ರನ್‌ ಗುರಿ ನೀಡಿದೆ. ಬೆಂಗಳೂರು ಪರ ಫಾಫ್‌ ಡು ಪ್ಲೆಸಿಸ್ 54 ರನ್‌, ವಿರಾಟ್‌ ಕೊಹ್ಲಿ 47 ರನ್‌, ರಜತ್‌ ಪಾಟಿದಾರ್‌ 41 ರನ್ ಹಾಗೂ ಕ್ಯಾಮೆರಾನ್‌ ಗ್ರೀನ್‌ ಅಜೇಯ 38 ರನ್‌ ಗಳಿಸಿದರು.

ಟೂರ್ನಿಯ ಪ್ಲೇಆಫ್‌ಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಈ ಪಂದ್ಯ ಬೆಂಗಳೂರು ಹಾಗೂ ಚೆನ್ನೈಗೆ ಅತ್ಯಂತ ನಿರ್ಣಾಯಕವಾಗಿದೆ. ಅದರಲ್ಲಿಯೂ ವಿಶೇಷವಾಗಿ ತವರು ತಂಡ ಆರ್‌ಸಿಬಿ, ಪ್ಲೇಆಫ್‌ಗೆ ಅರ್ಹತೆ ಪಡೆಯಬೇಕೆಂದರೆ, 18 ರನ್‌ ಅಥವಾ 18.1 ಓವರ್‌ಗಳಿಗೆ ಚೇಸ್‌ ಮಾಡಬೇಕು. ಇಲ್ಲವಾದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ನಾಕ್‌ಔಟ್‌ಗೆ ಅರ್ಹತೆ ಪಡೆಯಲಿದೆ.

ಕೋಲ್ಕತಾ ನೈಟ್‌ ರೈಡರ್ಸ್‌, ರಾಜಸ್ಥಾನ್‌ ರಾಯಲ್ಸ್ ಹಾಗೂ ಸನ್‌ರೈಸರ್ಸ್‌ ಹೈದರಬಾದ್‌ ತಂಡಗಳು ಈಗಾಗಲೇ ಪ್ಲೇಆಫ್‌ಗೆ ಅಧಿಕೃತವಾಗಿ ಅರ್ಹತೆಯನ್ನು ಪಡದುಕೊಂಡಿವೆ. ಇದೀಗ ಇನ್ನುಳಿದ ಒಂದು ಸ್ಥಾನಕ್ಕೆ ಇಂದಿನ ಪಂದ್ಯದ ಫಲಿತಾಂಶದಿಂದ ನಿರ್ಧಾರವಾಗಲಿದೆ.

Comments (0)

Your email address will not be published. Required fields are marked *

Back to top button