ಬೆಂಗಳೂರು: ಹಾಡಹಗಲೇ ನಗರದಲ್ಲಿ 7.11 ಕೋಟಿ ರೂಪಾಯಿ ದರೋಡೆ ಪ್ರಕರಣದ ಪ್ರಮುಖ ಆರೋಪಿಯನ್ನು ಪ್ತತೆಹಚ್ಚಿ ಪೊಲೀಸರು ಬಂಧಿಸಿದ್ದಾರೆ.. ಬನಶಂಕರಿ ಪೊಲೀಶ್ ಠಾಣೆಯ ಕೊಟ್ರೇಶಿ ನೇತೃತ್ವದಲ್ಲಿ ತಮಿಳುನಾಡಿನಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ಧಾರೆ…
ಬಂಧಿತ ಆರೋಪಿ ಬೆಂಗಳೂರಿನ ಕಾಡುಗೊಂಡನಹಳ್ಳಿ ನಿವಾಸಿಯಾಗಿರುವ ಜೆ. ಕ್ಸೇವಿಯರ್ ವ್ಯಾಗನರ್ ನಲ್ಲಿ ತಮಿಳುನಾಡಿಗೆ ಹೋಗಿದ್ದ. ಕುಪ್ಪಂ ಪ್ರದೇಶದಲ್ಲಿ ಹಣದ ಬಾಕ್ಸ್‌ನ್ನು ತೆಗೆದು ನಗದನ್ನು ಚೀಲದಲ್ಲಿ ತುಂಬಿಕೊಂಡಿದ್ದಲ್ಲದೇ ದರೋಡೆಗೆ ಬಳಸಿದ್ದ ಇನ್ನೋವಾ ಕಾರನ್ನೂ ಅಲ್ಲಿಯೇ ಬಿಟ್ಟು, ಮತ್ತೊಂದು ವ್ಯಾಗನಾರ್ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ.
ಚಿತ್ತೂರಿನ ಕುಪ್ಪಂ ಬಳಿ ಹಣದ ಪೆಟ್ಟಿಗೆಗಳು ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬನಶಂಕರಿ ಠಾಣೆಯ ಇನ್ಸ್ಪೆಕ್ಟರ್ ಕೊಟ್ರೇಶಿ ನೇತೃತ್ವದ ವಿಶೇಷ ಪೊಲೀಸರ ತಂಡ ಸೆರೆಹಿಡಿದಿದೆ. ಆರೋಪಿಯನ್ನು ಸಿದ್ದಾಪುರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.
ದರೋಡೆ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು 5.30 ಕೋಟಿ ರೂ. ಹಣವನ್ನು ಆಂಧ್ರದಲ್ಲಿ ವಶಪಡಿಸಿಕೊಂಡಿದ್ದರು. ಕೇಸ್ನ ಪ್ರಮುಖ ಆರೋಪಿಗಳಾದ ಗೋವಿಂದಪುರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ಮತ್ತು ಕಿಂಗ್ಪಿನ್ ರವಿಯ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.


