ಬೆಳಗಾವಿ: ರಾಜ್ಯದಲ್ಲಿ RSS ಬ್ಯಾನ್ ಮಾಡಿದರೆ ತಪ್ಪೇನಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ಧಾರೆ..
ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒಂದು ರಾಜಕೀಯ ಸಂಘಟನೆಯೇ ಹೊರತು, ಸಾಮಾಜಿಕ ಸಂಘಟನೆಯಲ್ಲ. ಹೀಗಾಗಿ ಅದರ ಚಟುವಟಿಕೆಗಳು ಮತ್ತು ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಬಾರದು. ರಾಜ್ಯದಲ್ಲಿ ಆರ್‌ಎಸ್‌ಎಸ್ ನಿಷೇಧಿಸಬೇಕು. ಅದು ತನ್ನ ಚಟುವಟಿಕೆಗಳಿಗೆ ಸರ್ಕಾರಿ ಆವರಣ ಬಳಕೆ ಮಾಡಬಾರದು ಎಂದರು.
ಆರ್‌ಎಸ್‌ಎಸ್ ನಾಯಕರು ವಿವಿಧ ಸರ್ಕಾರಗಳನ್ನು ರಚಿಸುವಲ್ಲಿ ಮತ್ತು ಉರುಳಿಸುವಲ್ಲಿ ಭಾಗಿಯಾಗಿದ್ದಾರೆ. ಚುನಾವಣೆಯಲ್ಲೂ ಈ ಸಂಘಟನೆಯ ನಾಯಕರು ಸ್ಪರ್ಧಿಸುತ್ತಾರೆ. ಹಾಗಾಗಿ ಅದು ಸಾಮಾಜಿಕ ಸಂಘಟನೆಯಲ್ಲ ಎಂದು ದಿನೇಶ ಗುಂಡೂರಾವ್ ಹೇಳಿದರು.
ಇನ್ನು ಸಿಎಂ ಸಿದ್ದರಾಮಯ್ಯ ಕರೆದಿದ್ದ ಭೋಜನ ಕೂಟದಲ್ಲಿ ಸಂಪುಟ ಪುನಾರಚನೆ ಬಗ್ಗೆ ಚರ್ಚೆಯಾಗಿಲ್ಲ. ಔತಣಕೂಟದಲ್ಲಿ ಹಾಜರಾಗಿದ್ದ ಯಾರೂ ಈ ವಿಷಯ ಪ್ರಸ್ತಾಪಿಸಿಯೇ ಇಲ್ಲ. ಅಲ್ಲಿ ವಿವಿಧ ಇಲಾಖೆಗಳ ಕಾರ್ಯಕ್ಷಮತೆ ಮತ್ತು ರಾಜ್ಯದ ಪರಿಸ್ಥಿತಿ ಬಗ್ಗೆ ಮಾತ್ರ ಚರ್ಚೆ ನಡೆಸಲಾಯಿತು ಎಂದರು.
ರಾಜ್ಯದಾದ್ಯಂತ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಕಡ್ಡಾಯ ಕೆಲಸ ನಿಯಮ ಮತ್ತು ಕೌನ್ಸೆಲಿಂಗ್ ಮೂಲಕ ವೈದ್ಯರನ್ನು ನೇಮಿಸಲಾಗುವುದು. ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯರ ನೇಮಕ ಪ್ರಕ್ರಿಯೆ ನಡೆದಿದೆ. 230 ವೈದ್ಯರ ನೇಮಕಾತಿ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.


