#Exclusive NewsTop Newsಜಿಲ್ಲೆಸುದ್ದಿ

ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ರೂಪಾ ದೂರು….!

ಮೈಸೂರು : ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಚಾಮುಂಡೇಶ್ವರಿ ದೇವಾಲಯದ  ಕಾರ್ಯದರ್ಶಿ ರೂಪಾ ಅವರು ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸರ್ಕಾರಿ ಕೆಲಸಕ್ಕೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಶನಿವಾರ (ಡಿ.14) ರಾತ್ರಿ ದೂರು ನೀಡಿದ್ದು, ಎಫ್​ಐಆರ್​ ದಾಖಲಾಗಿದೆ.

ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ಚಾಮುಂಡೇಶ್ವರಿ ದೇವಲಾಯದ ಕಾರ್ಯದರ್ಶಿ ರೂಪಾ ಅವರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಅವರು ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ವಿಡಿಯೋ ಸಮೇತ ದೂರು ನೀಡಿದ್ದರು.

ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ಬಂದ ಸೀರೆಗಳನ್ನು ಕಾರ್ಯದರ್ಶಿ ರೂಪಾ ಅವರ ಕಾರಿನಲ್ಲಿ ತುಂಬಿಸಿ ಸಾಗಾಟ ಮಾಡಲಾಗುತ್ತಿದೆ. ಯುವಕನೊಬ್ಬ ಕಾರಿಗೆ ಸೀರೆ ತುಂಬಿಸಿಕೊಂಡು ಹೋಗುವ ವಿಡಿಯೋದ ಸಿಡಿಯನ್ನು ದೂರಿನೊಂದಿಗೆ ಲಗ್ಗತ್ತಿಸಿದ್ದರು.ಈ ಹಿನ್ನೆಲೆಯಲ್ಲಿ, ಸ್ನೇಹಮಯಿ ಕೃಷ್ಣ ಅವರು ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ದೇವಸ್ಥಾನದ ಕಾರ್ಯದರ್ಶಿ ರೂಪ ಅವರು ದೂರು ದಾಖಲಿಸಿದ್ದಾರೆ.

 

Comments (0)

Your email address will not be published. Required fields are marked *

Back to top button