Thursday, November 20, 2025
27.5 C
Bengaluru
Google search engine
LIVE
ಮನೆದೇಶ/ವಿದೇಶಭಾರತಕ್ಕೆ ಬೆಂಬಲ ಘೋಷಿಸಿದ ರಷ್ಯಾ..!

ಭಾರತಕ್ಕೆ ಬೆಂಬಲ ಘೋಷಿಸಿದ ರಷ್ಯಾ..!

ಬೆಂಗಳೂರು : ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಭಾರತ- ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹೊತ್ತಲ್ಲೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ವ್ಲಾಡಿಮಿರ್ ಪುಟಿನ್ ಅವರು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.ಈಗಾಗಲೇ ಅಂಗೋಲಾದಿಂದಲೂ ಭಾರತಕ್ಕೆ ಬೆಂಬಲ ಘೋಷಣೆಯಾಗಿದೆ.

ಅಮಾಯಕರ ಪ್ರಾಣಹಾನಿಗಾಗಿ ವ್ಲಾಡಿಮಿರ್​ ಪುಟಿನ್​ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಘೋರ ದಾಳಿ ನಡೆಸಿದ ದುಷ್ಕರ್ಮಿಗಳು ಹಾಗೂ ಅವರ ಬೆಂಬಲಿಗರನ್ನು ಕಾನೂನು ಕ್ರಮಕ್ಕೆ ತರಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments