Tuesday, February 10, 2026
24.4 C
Bengaluru
Google search engine
LIVE
ಮನೆ#Exclusive NewsTop Newsಉಕ್ರೇನ್ ಬಸ್ ಮೇಲೆ ರಷ್ಯಾ ಡ್ರೋನ್ ದಾಳಿ; 15 ಮಂದಿ ಕಾರ್ಮಿಕರು ಬಲಿ

ಉಕ್ರೇನ್ ಬಸ್ ಮೇಲೆ ರಷ್ಯಾ ಡ್ರೋನ್ ದಾಳಿ; 15 ಮಂದಿ ಕಾರ್ಮಿಕರು ಬಲಿ

ಉಕ್ರೇನ್‌ನ ಡ್ನಿಪ್ರೊಪೆಟ್ರೋವ್ಸ್ಕ್ ಪ್ರಾಂತ್ಯದ ಪಾವ್ಲೋಹ್ರಾದ್ ಜಿಲ್ಲೆಯ ಟೆರ್ನಿವ್ಕಾ ಸಮೀಪ ಭೀಕರ ದಾಳಿ ನಡೆದಿದೆ. ಶಿಫ್ಟ್ ಮುಗಿಸಿ ಮನೆಗೆ ಮರಳುತ್ತಿದ್ದ ಡ್ನಿಪ್ರೊ ಪ್ರದೇಶದ ಗಣಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅನ್ನು ಗುರಿಯಾಗಿಸಿಕೊಂಡು ರಷ್ಯಾ ಡ್ರೋನ್ ದಾಳಿ ನಡೆಸಿದೆಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಮತ್ತು ಕನಿಷ್ಠ 7 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ದಾಳಿಗೊಳಗಾದ ಬಸ್ ಉಕ್ರೇನ್‌ನ ಅತಿದೊಡ್ಡ ಖಾಸಗಿ ಇಂಧನ ಕಂಪನಿಯಾದ DTEK ಗೆ ಸೇರಿದ್ದಾಗಿದೆ. ಕಂಪನಿಯ ಮುಖ್ಯಸ್ಥ ಮ್ಯಾಕ್ಸಿಮ್ ಟಿಮ್ಚೆಂಕೊ ಈ ಘಟನೆಯನ್ನು ನಾಗರಿಕರ ಮೇಲೆ ನಡೆದ ಅಪ್ರಚೋದಿತ ಭಯೋತ್ಪಾದಕ ದಾಳಿ ಎಂದು ಖಂಡಿಸಿದ್ದಾರೆ. ದಾಳಿಯ ರಭಸಕ್ಕೆ ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಈ ದಾಳಿಗೆ ತೀವ್ರ ಸಂತಾಪ ವ್ಯಕ್ತಪಡಿಸುವುದರ ಜೊತೆಗೆ, ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆಯಲಿರುವ ಮುಂದಿನ ಸುತ್ತಿನ ಮಾತುಕತೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಇತ್ತೀಚೆಗಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಚರ್ಚಿಸಿ, ಶೀತಗಾಳಿಯ ಹಿನ್ನೆಲೆಯಲ್ಲಿ ದಾಳಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಮನವಿ ಮಾಡಿದ್ದರು ಎನ್ನಲಾಗಿತ್ತು. ಆದರೆ, ಈ ತಾತ್ಕಾಲಿಕ ಕದನ ವಿರಾಮದ ಅವಧಿ ಫೆಬ್ರವರಿ 1ಕ್ಕೆ ಮುಕ್ತಾಯಗೊಂಡ ಬೆನ್ನಲ್ಲೇ ಈ ಭೀಕರ ದಾಳಿ ಸಂಭವಿಸಿದೆ. ನಾಗರಿಕ ಮೂಲಸೌಕರ್ಯ ಮತ್ತು ಇಂಧನ ವಲಯದ ಕಾರ್ಮಿಕರ ಮೇಲೆ ನಡೆಯುತ್ತಿರುವ ಈ ದಾಳಿಗಳು ಜಾಗತಿಕ ಮಟ್ಟದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments