ಸಿನಿಮಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮೈಸೂರಲ್ಲಿ ಎಸ್.ಜಾನಕಿ ಅಂತ್ಯಕ್ರಿಯೆ!

S. Janaki's funeral in Mysore today with full government honors!

ಬೆಂಗಳೂರು : ಗಾನಕೋಗಿಲೆ, ಕನ್ನಡ ಚಿತ್ರರಂಗದ ಖ್ಯಾತ ಗಾಯಕಿ ಎಸ್ ಜಾನಕಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ ಜಾನಕಿ (86) ನಿನ್ನೆ ವಿಧಿವಶರಾಗಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮೈಸೂರಿನಲ್ಲಿ ಎಸ್.ಜಾನಕಿ ಅಂತ್ಯಕ್ರಿಯೆ ನಡೆಯಲಿದೆ.

ಸದ್ಯ ಮೈಸೂರಿನ ಮಹಾರಾಜ ಮೈದಾನದಲ್ಲಿ ಸಾರ್ವಜನಿಕ ಹಾಗೂ ಗಣ್ಯರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೊಮ್ಮಗಳು ಅಪ್ಸರಾ ಅವರಿಂದ ಎಸ್.ಜಾನಕಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ಕೆಲ ವರ್ಷಗಳ ಹಿಂದೆ ಜಾನಕಿ ಅವರ ಪುತ್ರ ನಿಧನರಾದರು. ಹೀಗಾಗಿ, ಅವರ ಮಗನ ಮಗಳಿಂದ ಗಾಯಕಿಯ ಅಂತ್ಯಸಂಸ್ಕಾರ ನಡೆಯಲಿದೆ. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ.

ಎಸ್.ಜಾನಕಿ ಅವರು ಮೈಸೂರಿನಲ್ಲಿ ಅಂತ್ಯಸಂಸ್ಕಾರ ನಡೆಯಬೇಕು ಎಂದು ಇಚ್ಛಿಸಿದ್ದರು. ಅವರ ಇಚ್ಛೆಯಂತೆ ಮೈಸೂರಿನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್.ಜಾನಕಿ ಅಂತ್ಯಸಂಸ್ಕಾರ ನೇರವೇರಲಿದೆ. ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕಿ ಎಸ್‌.ಜಾನಕಿ ವಿಧಿವಶ ಹಿನ್ನಲೆ ಇಡೀ ಸಂಗೀತ ಕ್ಷೇತ್ರ ಕಂಬನಿ ಮಿಡಿದಿದೆ. ಕನ್ನಡ ಚಿತ್ರರಂಗ ಸೇರಿದಂತೆ ರಾಜಕೀಯ ನಾಯಕರು ಕೂಡ ಸಂತಾಪ ಸೂಚಿಸಿದ್ದಾರೆ.

ಕನ್ನಡ ಸಿನಿಮಾ ಹಾಗೂ ಸಂಗೀತಕ್ಕೆ ಅಪಾರ ಕೊಡುಗೆ ನೀಡಿರುವ ಎಸ್ ಜಾನಕಿ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. 4 ಬಾರಿ ರಾಷ್ಟ್ರ ಪ್ರಶಸ್ತಿ, ತಮಿಳು, ಮಲಯಾಳ, ಕನ್ನಡ, ತೆಲುಗು ಸೇರಿದಂತೆ ವಿವಿಧ ಭಾಷೆಗಳಲ್ಲಿ, ವಿವಿಧ ರಾಜ್ಯಗಳ ಪುರಸ್ಕಾರ ಜಾನಕಿಯವರಿಗೆ ಸಂದಿವೆ. 

Comments (0)

Your email address will not be published. Required fields are marked *

Back to top button