Wednesday, January 28, 2026
24.9 C
Bengaluru
Google search engine
LIVE
ಮನೆ#Exclusive Newsಎಸ್‌.ಎಂ.ಕೃಷ್ಣ ಅವರಿಗೆ ʼಕರ್ನಾಟಕ ರತ್ನʼ ಕೋಡಬೇಕು : ಆರ್​.ಅಶೋಕ್​

ಎಸ್‌.ಎಂ.ಕೃಷ್ಣ ಅವರಿಗೆ ʼಕರ್ನಾಟಕ ರತ್ನʼ ಕೋಡಬೇಕು : ಆರ್​.ಅಶೋಕ್​

ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್‌.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ. ಶಾಸಕ, ಸಚಿವ, ಸ್ಪೀಕರ್‌, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಶ್ರೀ ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಕರ್ನಾಟಕ ರತ್ನʼ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಶ್ರೀಯುತರಿಗೆ ʼಕರ್ನಾಟಕ ರತ್ನʼ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತಿದ್ದೇನೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments