Top Newsರಾಜಕೀಯರಾಜ್ಯಸುದ್ದಿ

ಸಚಿವ ಸ್ಥಾನಕ್ಕೆ ಎಸ್.ಎಸ್. ಮಲ್ಲಿಕಾರ್ಜುನ್ ಗುಡ್‌ಬೈ? ಸಿಎಂಗೆ ಬರೆದ ಪತ್ರದಲ್ಲಿ ಏನಿದೆ?

ರಾಜಕೀಯದಲ್ಲಿ ಸಚಿವ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆಯುವ ಈ ಕಾಲದಲ್ಲಿ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸ್ವತಃ ತಮಗೆ ಸಚಿವ ಸ್ಥಾನದಿಂದ ಮುಕ್ತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ವ್ಯಾಪಾರ-ವ್ಯವಹಾರಗಳ ಒತ್ತಡ ಮತ್ತು ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಕಾರಣ ನೀಡಿ ಅವರು ಕಳೆದ ವಾರವೇ ಸಿಎಂ ಅವರಲ್ಲಿ ಈ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಇದು ಕೇವಲ ವೈಯಕ್ತಿಕ ನಿರ್ಧಾರವೋ ಅಥವಾ ಇದರ ಹಿಂದೆ ದೊಡ್ಡ ರಾಜಕೀಯ ತಂತ್ರಗಾರಿಕೆ ಅಡಗಿದೆಯೇ ಎಂಬ ಚರ್ಚೆ ಶುರುವಾಗಿದೆ.

ರಾಜಕೀಯ ಪಂಡಿತರ ಲೆಕ್ಕಾಚಾರದ ಪ್ರಕಾರ, ಸಚಿವ ಸ್ಥಾನ ತ್ಯಜಿಸುವ ಮೂಲಕ ತಮ್ಮ ಪುತ್ರನಿಗೆ ಮುಂಬರುವ ಉಪಚುನಾವಣೆಯಲ್ಲಿ ಟಿಕೆಟ್ ಕೊಡಿಸಲು ಹಾಗೂ ಅವರ ರಾಜಕೀಯ ಭವಿಷ್ಯಕ್ಕೆ ಅಡಿಪಾಯ ಹಾಕಲು ಮಲ್ಲಿಕಾರ್ಜುನ್ ಅವರು ಈ ‘ತ್ಯಾಗ’ದ ಹಾದಿ ತುಳಿದಿರಬಹುದು ಎನ್ನಲಾಗುತ್ತಿದೆ. ಹಾಲಿ ಸಚಿವರೊಬ್ಬರು ರಾಜೀನಾಮೆಗೆ ಮುಂದಾಗಿರುವುದು ಕಾಂಗ್ರೆಸ್ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದು, ಸಿಎಂ ಸಿದ್ದರಾಮಯ್ಯ ಅವರು ಈ ಮನವಿಗೆ ಹೇಗೆ ಸ್ಪಂದಿಸುತ್ತಾರೆ ಎಂಬುದು ಈಗ ಎಲ್ಲರ ಗಮನ ಸೆಳೆದಿದೆ.

Comments (0)

Your email address will not be published. Required fields are marked *

Back to top button