ಬೆಂಗಳೂರು: ಬೀದರ್ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಜಟಾಪಟಿ ಜೋರಾಗಿದೆ. ಇದೇ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ಆರೋಪ ಪ್ರತ್ಯಾರೋಪಳು ಜೋರಾಗಿವೆ. ಈ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಈ ಹಿನ್ನಲೆ ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ನೀಡಿದ ಆರೋಪದ ಮೇಲೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯರಾದ ಸಿ.ಟಿ.ರವಿ, ಎನ್.ರವಿಕುಮಾರ್ ಸೇರಿ ಒಟ್ಟು 13 ಬಿಜೆಪಿ ನಾಯಕರ ವಿರುದ್ಧ ಪಿಎಸ್ಐ ಶಶಿಧರ ವಣ್ಣೂರ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.


