Wednesday, April 30, 2025
29.2 C
Bengaluru
LIVE
ಮನೆಸಿನಿಮಾಡಾರ್ಲಿಂಗ್ ಪ್ರಭಾಸ್-ಸೀತಾರಾಮಂ, ಹೊಸ ಸಿನಿಮಾ..ಶುಭ ಹಾರೈಸಿದ ಸಲಾರ್ ಸಾರಥಿ ಪ್ರಶಾಂತ್ ನೀಲ್

ಡಾರ್ಲಿಂಗ್ ಪ್ರಭಾಸ್-ಸೀತಾರಾಮಂ, ಹೊಸ ಸಿನಿಮಾ..ಶುಭ ಹಾರೈಸಿದ ಸಲಾರ್ ಸಾರಥಿ ಪ್ರಶಾಂತ್ ನೀಲ್

ಸೆಟ್ಟೇರಿತು ಡಾರ್ಲಿಂಗ್ ಪ್ರಭಾಸ್-ಸೀತಾರಾಮಂ ಡೈರೆಕ್ಟರ್ ಹೊಸ ಸಿನಿಮಾ…ಶುಭ ಹಾರೈಸಿದ ಸಲಾರ್ ಸಾರಥಿ ಪ್ರಶಾಂತ್ ನೀಲ್

ಸಲಾರ್ ಹಾಗೂ ಕಲ್ಕಿ 2898AD ಸೂಪರ್ ಸಕ್ಸಸ್ ಬೆನ್ನಲ್ಲೇ ಡಾರ್ಲಿಂಗ್ ಪ್ರಭಾಸ್ ಹೊಸ ಸಿನಿಮಾ ಸೆಟ್ಟೇರಿದೆ. ಹೈದರಾಬಾದ್‌ನಲ್ಲಿಂದು ಚಿತ್ರಕ್ಕೆ ಮುಹೂರ್ತ ನೆರವೇರಿದ್ದು, ಸಲಾರ್ ನಿರ್ದೇಶಕ ಪ್ರಶಾಂತ್ ನೀಲ್ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

‘ಸೀತಾರಾಮಂ’ ಸಿನಿಮಾ ನಿರ್ದೇಶಿಸಿ ಯಶಸ್ಸು ಕಂಡಿರುವ ಹನು ರಾಘವಪುಡಿ ಪ್ರಭಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯಕ್ಕೆ #ಪ್ರಭಾಸ್ ಹನು ಎಂದು ತಾತ್ಕಾಲಿಕವಾಗಿ ಟೈಟಲ್ ಇಡಲಾಗಿದೆ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ನಡಿ ನವೀನ್ ಯೆರ್ನೇನಿ ಮತ್ತು ವೈ ರವಿಶಂಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಪ್ರಭಾಸ್ ಗೆ ಜೋಡಿಯಾಗಿ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಕಂ ಡ್ಯಾನ್ಸರ್ ಇಮಾನ್ವಿ ಈ ಚಿತ್ರದಲ್ಲಿ ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ. 1940ರ ದಶಕದ ಕಥೆಯನ್ನು ಹನು ರಾಘವಪುಡಿ ಪ್ರೇಕ್ಷಕರ ಎದುರು ಪ್ರಸ್ತುತಪಡಿಸಲಿದ್ದಾರೆ. ಬಾಲಿವುಡ್ ದಿಗ್ಗಜ ಮಿಥುನ್ ಚಕ್ರವರ್ತಿ ಮತ್ತು ಜಯಪ್ರದಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ.

ಸುದೀಪ್ ಚಟರ್ಜಿ ಐಎಸ್‌ಸಿ ಛಾಯಾಗ್ರಹಣ, ವಿಶಾಲ್ ಚಂದ್ರಶೇಖರ್ ಸಂಗೀತ, ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನ ಚಿತ್ರಕ್ಕಿದೆ. ಶೀಘ್ರದಲ್ಲಿಯೇ ಪ್ರಭಾಸ್ ಹಾಗೂ ಹನು ರಾಘವಪುಡಿ ಹೊಸ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

 

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments