ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರು ಕಾರ್ಯಕ್ರಮವೊಂದರಲ್ಲಿ ಆಡಿರುವ ಒಂದು ಮಾತು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅವರ ಹೇಳಿಕೆಗೆ ಭಾರೀ ವಿರೊಧ ವ್ಯಕ್ತವಾಗುತ್ತಿದೆ. ಅದಲ್ಲೂ ಬ್ರಾಹ್ಮಣ ಸಮುದಾಯದ ಕುರಿತು ಹಂಸಲೇಖ ಅವರು ಆ ಒಂದು ಮಾತಿಗೆ ಹಲವು ಆಕ್ಷೇಪ ವ್ಯಕ್ತಪಡಿಸಿ ತಮ್ಮ ಬೇಸರವನ್ನು ಹೊರ ಹಾಕುತ್ತಿದ್ದಾರೆ. ಅಂದಹಾಗೇ, ಹಂಸಲೇಖ ಅವರು ಹೇಳಿದ್ದೇನು? ಕನ್ನಡ ಹೆಸರಿನಲ್ಲಿ ಒಂದು ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ರಾ? ಅವರ ಹೇಳಿಕೆಗೆ ವಿರೋಧ ವ್ಯಕ್ತವಾಗುತ್ತಿರುವುದು ಏಕೆ ಎಂಬ ಮಾಹಿತಿ ಇಲ್ಲದೆ.

ಬೆಂಗಳೂರಿನ ಬಸವ ಭವನದಲ್ಲಿ ಆಯೋಜಿಸಿದ್ದ ನಮ್ಮ ನಾಡು, ನಮ್ಮ ಆಳ್ವಿಕೆ ಎಂಬ ಚಿಂತನಾ ಕಾರ್ಯಕ್ರಮದಲ್ಲಿ ಹಂಸಲೇಖ ಅವರು ಭಾಗಿಯಾಗಿದ್ದರು. ಈ ವೇಳೆ ಸಭೆಯಲ್ಲಿ ನೆರೆದಿದ್ದವರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಹಂಸಲೇಖ ಅವರ ವಿಡಿಯೋ ವೈರಲ್ ಆಗಿದ್ದು, ಇದರಲ್ಲಿ ಅವರು ಕನ್ನಡದ ಪ್ರಾದೇಶಿಕ ಪಕ್ಷ ಕಟ್ಟುವುದು ಅಷ್ಟು ಸುಲಭದ ಕೆಲಸವಲ್ಲ. ದೇಶದ ಪ್ರತಿ ಬ್ರಾಹ್ಮಣನ ಮನೆಯಲ್ಲೂ ಭಗವದ್ಗೀತೆ ಜೊತೆಗೆ ಆರ್ ಎಸ್​ ಎಸ್​ ನ ಚಿಂತನ ಗಂಗಾ ಪುಸ್ತಕ ಇರುತ್ತೆ. 40 ವರ್ಷದ ಹಿಂದೆ ನಾನು ಚಿಂತನ ಗಂಗಾ ಪುಸ್ತಕ ಓದಿದ್ದೆ, ಅದು ಆರ್​ ಎಸ್​ ಎಸ್​ ಅವರ ಸಂವಿಧಾನ. ಆ ಪುಸ್ತಕ ಎಷ್ಟು ಕೆಲಸ ಮಾಡುತ್ತೆ ಎಂದರೇ, ರಾಷ್ಟ್ರದಲ್ಲಿ ನಡೆಯುತ್ತಿರುವ ಸಂಗತಿಗಳಿಗೆ ವಿರುದ್ಧದವಾದ ಪ್ರತಿದಾಳಿ ಹೇಗೆ ಮಾಡಬೇಕು ಅಂತ ಆ ಚಿಂತನಾ ಗಂಗಾ ಮೂಲಕ ಮೆಸೇಜ್ ಕಳುಹಿಸುತ್ತಾರೆ, ಅದು ಬೇರೆ ವಿಚಾರ ಬಿಡಿ ಎಂದು ಹೇಳಿದ್ದಾರೆ.

ಕನ್ನಡದ ಪಕ್ಷ ಕಟ್ಟುವವರಿಗೂ ಅಂತಹ ಒಂದು ಮಾರ್ಗಸೂಚಿಯ ಅವಶ್ಯಕತೆ ಇದೆ. ಅದು ಚಿಂತನ ಗಂಗಾದಂತಿರದೆ ನಾಡನ್ನ ಕಟ್ಟುವಂತೆ ಇರ್ಬೇಕು. ಪ್ರತಿ ಕನ್ನಡಿಗ ಸಂವಿಧಾನದ ಜೊತೆ ಕನ್ನಡದ ಠರಾವನ್ನು ಇರಿಸಿಕೊಳ್ಳಬೇಕು ಎಂದು ಹಂಸಲೇಖ ಈ ವಿಡಿಯೋದಲ್ಲಿ ಹೇಳಿರುವುದನ್ನು ನೋಡಬಹುದು.

ಹಂಸಲೇಖ ಅವರ ಹೇಳಿಕೆ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಕನ್ನಡಕ್ಕೆ ಬ್ರಾಹ್ಮಣ ಕೊಡುಗೆ ಏನು ಇಲ್ವಾ ಅಂತ ಸಾಕಷ್ಟು ಮಂದಿ ಪ್ರಶ್ನಿಸಿದ್ದಾರೆ. ದ.ರಾ.ಬೇಂದ್ರೆ, ಗಿರೀಶ್ ಕಾರ್ನಾಡ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಸೇರಿ ಹಲವರು ಕನ್ನಡಕ್ಕೆ ಕೊಡುಗೆ ನೀಡಿದ್ದಾರೆ. ಆದರೆ ಇವರ ಕೊಡುಗೆ ಕನ್ನಡಕ್ಕೆ ಏನು ಇಲ್ಲವೇ ಎಂದು ನೆಟ್ಟಿಗರೊಬ್ಬರು ಪ್ರಶ್ನಿಸಿದ್ದಾರೆ.

ಇನ್ನು, ಕನ್ನಡ ಕುರಿತು ನಡೆದ ಕಾರ್ಯಕ್ರಮದಲ್ಲಿ ಹಂಸಲೇಖ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಒಂದು ಸಮುದಾಯದ ವಿರುದ್ಧ ಕಿಡಿಕಾರಲು ಹಂಸಲೇಖ ಅವರು ಬಳಕೆ ಮಾಡಿಕೊಂಡಿದ್ದಾರೆ ಅಂತ ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರ ವಿರುದ್ಧದವೂ ವ್ಯಂಗ್ಯವಾಡಿರುವ ಹಂಸಲೇಖ ಅವರು, ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಗೆದ್ದು ಸಂಸತ್ ಪ್ರವೇಶ ಮಾಡುವ ಸಂದರ್ಭದಲ್ಲಿ ಸಂಸರ್ ಭವನಕ್ಕೆ ನಮಸ್ಕರಿಸಿ ಮೋದಿ ಪ್ರವೇಶಿಸಿದ್ದರು. ಆದ್ದರಿಂದ ಸಂವಿಧಾನವನ್ನೇ ಬದಲಿಸಬಹುದಾಗಿದೆ. ಆದ್ದರಿಂದ ಕನ್ನಡಿಗರು ಎಚ್ಚರಿಕೆ ಇಂದ ಇರ್ಬೇಕು ಅಂತ ಹಂಸಲೇಖ ಹೇಳಿದ್ದಾರೆ.

By Veeresh

Leave a Reply

Your email address will not be published. Required fields are marked *

Verified by MonsterInsights