ಬೆಂಗಳೂರು: ಮಲಯಾಳಂ ಹೇಮಾ ಕಮಿಟಿಯಂತೆ ಸ್ಯಾಂಡಲ್‌ವುಡ್‌ನಲ್ಲೂ ಮಹಿಳೆಯರ ಸುರಕ್ಷತೆಗೆ ಕಮಿಟಿಯಾಗಬೇಕು ಎಂದು ನಟಿ ಸಂಜನಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಲೈಂಗಿಕ ದೌರ್ಜನ್ಯಗಳ ತನಿಖೆಗೆ ಸಮಿತಿ ರಚಿಸುವಂತೆ ಒತ್ತಾಯಿಸಿ ಮನವಿ ಮಾಡಿದರು.
ಮಲಯಾಳಂ ಸಿನಿಮಾ ರಂಗದಲ್ಲಿ ಜಸ್ಟಿಸ್ ಹೇಮಾ ವರದಿ ಬಿರುಗಾಳಿಯನ್ನೇ ಎಬ್ಬಿಸಿದೆ. ಒಂದು ವಾರದಿಂದ ಮಲಯಾಳಂ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಮಹಿಳೆಯರ ಮೇಲಿನ ಕಿರುಕುಳಕ್ಕೆ ಸಂಬಂಧಿಸಿದಂತೆ ದೂರುಗಳು ದಾಖಲಾಗುತ್ತಿವೆ. ಹಲವರು ತಲೆದಂಡ ಕೂಡ ಆಗಿದೆ. ಕಲಾವಿದರ ಸಂಘದ ಅಧ್ಯಕ್ಷರಿಂದ ಹಿಡಿದು, ಪದಾಧಿಕಾರಿಗಳು ಕೂಡ ರಾಜಿನಾಮೆ ಸಲ್ಲಿಸಿದ್ದಾರೆ. ಈಗ ಅಂಥದ್ದೊಂದು ಕಮಿಟಿಯನ್ನು ನಿವೃತ್ತಿ ನ್ಯಾಯಾಧೀಶರ ನೇತೃತ್ವದಲ್ಲಿ ರಚಿಸಬೇಕು ಅಂತ ಸ್ಯಾಂಡಲ್‌ವುಡ್‌ನಲ್ಲೂ ಒತ್ತಾಯಿಸಿದ್ದಾರೆ.